ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ಪಿ.ಚಿದಂಬರಂಗೆ ನಿರೀಕ್ಷಣಾ ಜಾಮೀನು, ಜುಲೈ 10ರವರೆಗೂ ಬಂಧನವಿಲ್ಲ

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ವಿತ್ತ ಸಚಿವ ಪಿ ಚಿದಂಬರಂ ಅವರಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ವಿತ್ತ ಸಚಿವ ಪಿ ಚಿದಂಬರಂ ಅವರಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ಪಿ ಚಿದಂಬರಂ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಪಿ ಚಿದಂಬರಂ ನಿರೀಕ್ಷಣಾ ಜಾಮಿನು ಕೋರಿ ದೆಹಲಿಯ ಪಾಟಿಯಾಲಾ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಪಾಟಿಯಾಲಾ ಕೋರ್ಟ್ ಚಿದಂಬರಂಗೆ ಜುಲೈ 10ರವರೆಗೂ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಏರ್‌ಸೆಲ್‌-ಮ್ಯಾಕ್ಸಿಸ್‌ ಪ್ರಕರಣದಲ್ಲಿ ಮಾಜಿ ವಿತ್ತಸಚಿವ ಪಿ. ಚಿದಂಬರಂ ವಿರುದ್ಧ ತರಾತುರಿಯ ಕ್ರಮ ಕೈಗೊಳ್ಳದಂತೆ ಕೋರ್ಟ್‌ ತನಿಖಾ ಸಂಸ್ಥೆಗೆ ಸೂಚಿಸಿದೆ. ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಚಿದಂಬರಂ ಅವರಿಗೆ ಸಮನ್ಸ್‌ ಜಾರಿ ಮಾಡಿತ್ತು. ಹೀಗಾಗಿ ಬಂಧನ ಭೀತಿ ಎದುರಿಸುತ್ತಿದ್ದ ಚಿದಂಬರಂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com