ಧ್ವಜ ಸಭೆ ನಡೆದ ಗಂಟೆಗಳೊಳಗೆ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್

ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿ ಹಾಗೂ ಗಡಿ ನಿಯಂತ್ರಣ ರೇಖೆ ಬಳಿ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಉದ್ಧಟತನ ಪ್ರದರ್ಶಿಸುತ್ತಿದ್ದ ಪಾಕಿಸ್ತಾನ ಜೊತೆಗೆ ಭಾರತ ಧ್ವಜ ಸಭೆ ನಡೆಸಿದ ಗಂಟೆಗಳಲ್ಲಿಯೇ ಮತ್ತೆ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿದೆ ಎಂದು ಮಂಗಳವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಜಮ್ಮು; ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿ ಹಾಗೂ ಗಡಿ ನಿಯಂತ್ರಣ ರೇಖೆ ಬಳಿ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಉದ್ಧಟತನ ಪ್ರದರ್ಶಿಸುತ್ತಿದ್ದ ಪಾಕಿಸ್ತಾನ ಜೊತೆಗೆ ಭಾರತ ಧ್ವಜ ಸಭೆ ನಡೆಸಿದ ಗಂಟೆಗಳಲ್ಲಿಯೇ ಮತ್ತೆ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿದೆ ಎಂದು ಮಂಗಳವಾರ ತಿಳಿದುಬಂದಿದೆ. 
ತಡರಾತ್ರಿ 1 ಗಂಟೆ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನ ಭಾರತೀಯ ಸೇನಾಪಡೆಯನ್ನು ಗುರಿಯಾಗಿರಿಸಿಕೊಂಡು ಮಾರ್ಟರ್ ಶೆಲ್ ಗಳ ಮೂಲಕ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಅಖ್ನೂರ್ ಸೆಕ್ಟರ್ ಬಳಿಯಿರುವ ಅಂತರಾಷ್ಟ್ರೀಯ ರೇಖೆ ಬಳಿ ಪಾಕಿಸ್ತಾನ ಸೇನೆ 2-3 ಮಾರ್ಟರ್ ಶೆಲ್ ಗಳ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. 
ಪಾಕಿಸ್ತಾನ ಸೇನೆ ದಾಳಿ ನಡೆಸಿದ್ದರೂ, ಭಾರತೀಯ ಸೇನೆ ಯಾವುದೇ ರೀತಿಯ ಪ್ರತಿದಾಳಿಯನ್ನು ನಡೆಸಲಿಲ್ಲ. ಘಟನೆಯಲ್ಲಿ ಯಾವುದೇ ಸಾವು-ನೋವು, ನಷ್ಟಗಳು ಸಂಭವಿಸಿಲ್ಲ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. 
ಭಾರತದ ಗಡಿ ಗ್ರಾಮ ಪ್ರದೇಶಗಳಲ್ಲಿ ಪಾಕಿಸ್ತಾನ ನಿರಂತರವಾಗಿ ಶೆಲ್ ದಾಳಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಜೂ.04 ರಂದು ಭಾರತ ಹಾಗೂ ಪಾಕಿಸ್ತಾನದ ನಡುವೆ ಧ್ವಜ ಸಭೆ (ಫ್ಲಾಗ್ ಮೀಟಿಂಗ್) ನಡೆದಿತ್ತು. ಸಭೆಯಲ್ಲಿ ಉಭಯ ದೇಶಗಳ ಅಧಿಕಾರಿಗಳು ಶಾಂತಿ ಕಾಪಾಡುವುದಕ್ಕೆ ಒಪ್ಪಿಗೆ ನೀಡಿದ್ದರು, ಇದೇ ವೇಳೆ ಭಾರತದ ಬಿಎಸ್ಎಫ್ ಅಧಿಕಾರಿಗಳು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿತ್ತು. ಅಪ್ರಚೋದಿತ ದಾಳಿ ನಡೆಸಿದರೆ ಪ್ರತೀಕಾರ ತೆಗೆದುಕೊಳ್ಳುವುದು ಖಂಡಿತ ಎಂದು ತಿಳಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com