2022ರ ವೇಳೆಗೆ ಪ್ರತಿಯೊಬ್ಬ ಭಾರತೀಯನಿಗೆ ಮನೆ ಒದಗಿಸುವ ಗುರಿ: ಪ್ರಧಾನಿ ಮೋದಿ

ಪ್ರತಿಯೊಬ್ಬ ಭಾರತೀಯರಿಗೆ 2022ರ ವೇಳೆಗೆ ಮನೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ...
ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ
Updated on

ನವದೆಹಲಿ: ಪ್ರತಿಯೊಬ್ಬ ಭಾರತೀಯರಿಗೆ 2022ರ ವೇಳೆಗೆ ಮನೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯನಿರತವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಇಂದು ದೆಹಲಿಯಲ್ಲಿ ನಮೊ ಆಪ್ ಮೂಲಕ ಪ್ರಧಾನ ಮಂತ್ರಿ ಆವಾಸ್ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಆವಾಸ್ ಯೋಜನೆಯೆಂದರೆ ಕೇವಲ ಇಟ್ಟಿಗೆ, ಗಾರೆಗಳಿಗೆ ಸಂಬಂಧಿಸಿದ್ದಲ್ಲ. ಜನರಿಗೆ ಉತ್ತಮ ಗುಣಮಟ್ಟದ ಜೀವನ ಒದಗಿಸುವುದು. 2022ರ ವೇಳೆಗೆ ಭಾರತ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸಿಕೊಳ್ಳುವ ಸಮಯದಲ್ಲಿ ಪ್ರತಿಯೊಬ್ಬ ಭಾರತೀಯನು ಕೂಡ ಮನೆ ಹೊಂದುವಂತಾಗಬೇಕು. ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಎನ್ ಡಿಎ ಸರ್ಕಾರದ 4 ವರ್ಷಗಳ ಆಡಳಿತದಲ್ಲಿ ಸುಮರು ಒಂದು ಕೋಟಿಗೂ ಅಧಿಕ ಮನೆಗಳನ್ನು ನಿರ್ಮಿಸಲಾಗಿದೆ. ಈ ಹಿಂದೆ ಮನೆ ನಿರ್ಮಾಣಕ್ಕೆಂದು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ 70ರಿಂದ 75  ಸಾವಿರ ರೂಪಾಯಿ ನೀಡಲಾಗುತ್ತಿತ್ತು. ಇಂದು ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ ಅದನ್ನು 1.30 ಲಕ್ಷ ರೂಪಾಯಿಗಳಿಗೆ ಏರಿಸಲಾಗಿದೆ. ಇಂದಿನ ಕೇಂದ್ರ ಸರ್ಕಾರ ಕೇವಲ ಒಂದು ವರ್ಗಕ್ಕೆ ಮಾತ್ರವಲ್ಲದೆ ಎಲ್ಲಾ ವರ್ಗದ ಜನರ ಏಳಿಗೆಗಾಗಿ ಶ್ರಮಿಸುತ್ತಿದೆ ಎಂದರು.

ಯುಪಿಎ ಸರ್ಕಾರದ ಅವಧಿಯಲ್ಲಿ ಬಿಪಿಎಲ್ ಪಟ್ಟಿಯ ಮೂಲಕ ಆವಾಸ್ ಯೋಜನೆಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿತ್ತು. ಇಂದು ನಮ್ಮ ಸರ್ಕಾರದಲ್ಲಿ ಸಾಮಾಜಿಕ-ಆರ್ಥಿಕ ಗಣತಿಯ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು.

ಮಧ್ಯವರ್ತಿಗಳ ಹಾವಳಿಯಿಂದ, ಭ್ರಷ್ಟಾಚಾರಿಗಳಿಂದ ತಪ್ಪಿಸಿ ಫಲಾನುಭವಿಗಳಿಗೆ ಇದರ ಲಾಭ ಯಾವುದೇ ಅಡೆತಡೆಗಳಿಲ್ಲದೆ ಸಿಗುವಂತಾಗಲು ನಾವು ಕೆಲಸ ಮಾಡುತ್ತಿದ್ದು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಬಡವರಿಗೆ ಕೈಗೆಟಕುವ ದರದಲ್ಲಿ ಮನೆ ನಿರ್ಮಾಣ ಮಾಡಿಕೊಡಲಿದ್ದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com