ರಾಷ್ಟ್ರೀಯ ಡಿಫೆನ್ಸ್ ಅಕಾಡೆಮಿ ಪ್ರಾಂಶುಪಾಲರ ವಿರುದ್ಧ ಸಿಬಿಐ ಪ್ರಕರಣ

ರಾಷ್ಟ್ರೀಯ ಡಿಫೆನ್ಸ್ ಅಕಾಡೆಮಿಯ ಪ್ರಾಂಶುಪಾಲರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.
ಸಿಬಿಐ
ಸಿಬಿಐ
ನವದೆಹಲಿ: ರಾಷ್ಟ್ರೀಯ ಡಿಫೆನ್ಸ್ ಅಕಾಡೆಮಿಯ ಪ್ರಾಂಶುಪಾಲರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. 
ಬೋಧಕ ಸಿಬ್ಬಂದಿಗಳ ನೇಮಕಾತಿ ವಿಷಯದಲ್ಲಿ ಹಗರಣ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇನಾ ಅಧಿಕಾರಿಗಳಿಗೆ ತರಬೇತಿ ನೀಡುವ ಪ್ರತಿಷ್ಠಿತ ಸಂಸ್ಥೆಯ ಪ್ರಾಂಶುಪಾಲರ ವಿರುದ್ಧ ಕೇಸ್ ದಾಖಲಿಸಲಾಗಿದೆ. 
ಓಂ ಪ್ರಕಾಶ್ ಶುಕ್ಲಾ ಆರೋಪ ಎದುರಿಸುತ್ತಿರುವ ಪ್ರಾಂಶುಪಾಲರಾಗಿದ್ದು ಪ್ರಾಂಶುಪಾಲರೊಂದಿಗೆ ರಾಜಕೀಯ ವಿಜ್ಞಾನ, ರಸಾಯನಶಾಸ್ತ್ರ ವಿಭಾಗ, ಗಣಿತ ವಿಭಾಗದ ಪ್ರಾಧ್ಯಾಪಕರುಗಳ ವಿರುದ್ಧವೂ ಸಹ ಕ್ರಿಮಿನಲ್ ಸಂಚು ರೂಪಿಸಿರುವ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.  ಆರೋಪಿಗಳ ಅಧಿಕೃತ ಕಚೇರಿ ಹಾಗೂ ಮನೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com