ಜಮ್ಮು-ಕಾಶ್ಮೀರ: ಸೇನಾ ಕ್ಯಾಂಪ್ ಮೇಲೆ ಭಯೋತ್ಪಾದಕ ದಾಳಿ

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರು ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದಾರೆ.
ಜಮ್ಮು-ಕಾಶ್ಮೀರ: ಸೇನಾ ಕ್ಯಾಂಪ್ ಮೇಲೆ ಭಯೋತ್ಪಾದಕ ದಾಳಿ
ಜಮ್ಮು-ಕಾಶ್ಮೀರ: ಸೇನಾ ಕ್ಯಾಂಪ್ ಮೇಲೆ ಭಯೋತ್ಪಾದಕ ದಾಳಿ
Updated on
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರು ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದಾರೆ. 
13 ರಾಷ್ಟ್ರೀಯ ರೈಫಲ್ಸ್(RR) ಬಂಡಿಪೋರ ಜಿಲ್ಲೆಯ ಹಜಿನ್ ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಭದ್ರತಾ ಸಿಬ್ಬಂದಿಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ. ರಂಜಾನ್ ವೇಳೆಯಲ್ಲಿ ಸೇನಾ ಕಾರ್ಯಾಚರಣೆ ನಡೆಸದಂತೆ ಭಾರತ ಸ್ವಯಂ ನಿಯಂತ್ರಣ ವಿಧಿಸಿಕೊಂಡಿದೆ. ಆದರೆ ಸೇನಾ ಪಡೆಗಳ ಮೇಲೆ ದಾಳಿ ನಡೆದಿದ್ದೇ ಆದಲ್ಲಿ ಪ್ರತ್ಯ್ತುತ್ತರ ನೀಡಲು ಸೇನೆಗೆ ಅಧಿಕಾರ ನೀಡಲಾಗಿದ್ದು, ಭಯೋತ್ಪಾದಕರು ಹಾಗೂ ಪಾಕಿಸ್ತಾನದ ಗುಂಡಿನ ದಾಳಿಗೆ ಸೇನೆ ಸಮರ್ಥ ಉತ್ತರ ನೀಡುತ್ತಿದೆ. 
ಪಾಕಿಸ್ತಾನ ಅಪ್ರಚೋದಿತ ದಾಳಿಗಳನ್ನು ನಡೆಸುತ್ತಲೇ ಇದ್ದರೆ ಖಂಡಿತವಾಗಿಯೂ ದಿಟ್ಟ ಉತ್ತರವನ್ನು ನೀಡುತ್ತೇವೆಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದ ಬೆನ್ನಲ್ಲೇ ಕಾಶ್ಮೀರದಲ್ಲಿ ಮತ್ತೊಂದು ಭಯೋತ್ಪಾದಕ ದಾಳಿ ನಡೆದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com