ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ದಿನದಲ್ಲಿ ರೈತರ ಸಾಲ ಮನ್ನಾ: ರಾಹುಲ್ ಗಾಂಧಿ

ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹತ್ತೇ ದಿನದಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on: 
ಮಂಡಸೋರ್: ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹತ್ತೇ ದಿನದಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಘೋಷಿಸಿದ್ದಾರೆ.
ಇಂದು ಮಂಡಸೋರ್ ಜಿಲ್ಲೆಯ ಪಿಪ್ಲಿಯಲ್ಲಿ ಕಳೆದ ವರ್ಷ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ನಲ್ಲಿ ಮೃತಪಟ್ಟ ರೈತರ ಸ್ಮರ್ಣಾರ್ಥ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಮಲ್ ನಾಥ್(ಮಧ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ) ಹಾಗೂ ಜ್ಯೋತಿರಾಧಿತ್ಯ ಸಿಂಧೆ(ರಾಜ್ಯ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ) ಸಮ್ಮುಖದಲ್ಲಿ ಹೇಳುತ್ತಿದ್ದೇನೆ, ಅಧಿಕಾರಕ್ಕೆ ಬಂದ ಹತ್ತೇ ದಿನದಲ್ಲಿ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದರು.
ಇದೇ ವೇಳೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಮೇಲೆ ಗೋಲಿ ಬಾರ್ ಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ರಾಹುಲ್ ಭರವಸೆ ನೀಡಿದರು.
ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಚತ್ತೀಸ್ ಗಢದಲ್ಲಿ ಈ ವರ್ಷ ನವೆಂಬರ್ ನಲ್ಲಿ ವಿಧಾನಸಭೆ ಚುನವಾಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com