ಕೇಂದ್ರದಿಂದ ಕಬ್ಬು ಬೆಳೆಗಾರರಿಗೆ 7,000 ಕೋಟಿ ರೂ ಪ್ಯಾಕೇಜ್

ಕಬ್ಬು ಬೆಳೆಗಾರರಿಗೆ 7,000 ಕೋಟಿ ರೂಪಾಯಿ ಪ್ಯಾಕೇಜ್ ನೀಡುವುದಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.
ಕೇಂದ್ರದಿಂದ ಕಬ್ಬು ಬೆಳೆಗಾರರಿಗೆ 7,000 ಕೋಟಿ ರೂ ಪ್ಯಾಕೇಜ್
ಕೇಂದ್ರದಿಂದ ಕಬ್ಬು ಬೆಳೆಗಾರರಿಗೆ 7,000 ಕೋಟಿ ರೂ ಪ್ಯಾಕೇಜ್
Updated on
ನವದೆಹಲಿ: ಕಬ್ಬು ಬೆಳೆಗಾರರಿಗೆ 7,000 ಕೋಟಿ ರೂಪಾಯಿ ಪ್ಯಾಕೇಜ್ ನೀಡುವುದಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. 
ಜೂ.06 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರತಿ ಒಂದು ಕೆ.ಜಿ ಸಕ್ಕರೆಗೆ ರೂ 29 ಕನಿಷ್ಠ ಬೆಲೆ ನಿಗದಿಪಡಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.  ಕಬ್ಬು ಬೆಳೆಗಾರರಿಗೆ ಸಕ್ಕರೆ ಮಿಲ್ ಗಳು ಬಾಕಿ ಇರಿಸಿಕೊಂಡಿರುವ ಹಣವನ್ನು ಪಾವತಿ ಮಾಡುವುದಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ 7,000 ಕೋಟಿ ಪ್ಯಾಕೇಜ್ ನ್ನು ಘೋಷಿಸುವುದನ್ನು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದಿಸಿದೆ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ. 
ಸುಮಾರು 20,000 ಕೋಟಿಯಷ್ಟು ಬಾಕಿ ಹಣವನ್ನು ಸರ್ಕಾರ ಕಬ್ಬು ಬೆಳೆಗಾರರಿಗೆ ನೀಡಬೇಕಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com