ಜಮ್ಮು-ಕಾಶ್ಮೀರ: ರಾಜನಾಥ್ ಸಿಂಗ್ ಭೇಟಿ ನಡುವಲ್ಲೇ ಸೇನೆ ಮೇಲೆ ಉಗ್ರರ ದಾಳಿ, 2 ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರಕ್ಕೆ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭೇಟಿ ನೀಡಿದೆ ಕೆಲವೇ ಗಂಟೆಗಳಲ್ಲಿ ಸೇನಾಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆಂದು ಗುರುವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಕೆರಣ್; ಜಮ್ಮು ಮತ್ತು ಕಾಶ್ಮೀರಕ್ಕೆ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭೇಟಿ ನೀಡಿದೆ ಕೆಲವೇ ಗಂಟೆಗಳಲ್ಲಿ ಸೇನಾಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆಂದು ಗುರುವಾರ ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಕೆರಣ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಸ್ತು ತಿರುಗುತ್ತಿದ್ದ ಸೇನಾಪಡೆಗಳ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. 
ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ಕೂಡಲೇ ಸೇನಾಸ್ಪತ್ರೆಗೆ ದಾಖಲು ಮಾಡಲಾಗಿದೆ. 
ಉಗ್ರರ ದಾಳಿಗೆ ಭಾರತೀಯ ಸೇನಾಪಡೆ ಕೂಡ ದಿಟ್ಟ ಉತ್ತರವನ್ನು ನೀಡಿದ್ದು, ಸೇನಾ ದಾಳಿಗೆ ಹೆದರಿದ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಗುಂಡಿನ ಚಕಮಕಿಗಳು ನಿಂತಿದ್ದು, ಉಗ್ರರಿಗಾಗಿ ಸೇನಾಪಡೆ ಕಾರ್ಯಾಚರಣೆಯನ್ನು ಮುಂದುವರೆಸಿವೆ ಎಂದು ತಿಳಿದುಬಂದಿದೆ. 
ಎರಡು ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಅವರು ಭೇಟಿ ನೀಡಿದ್ದಾರೆ. ಭೇಟಿ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರೊಂದಿಗೆ ಮಾತುಕತೆ ನಡೆಸಲಿದ್ದು, ಜೂನ್.28ರಿಂದ ಆರಂಭವಾಗಲಿರುವ ಅಮರನಾಥ ಯಾತ್ರೆಯ ಭದ್ರತಾ ಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com