ಅಮಿತ್ ಶಾ-ಠಾಕ್ರೆ ಭೇಟಿ ಹೊರತಾಗಿಯೂ ಶಿವಸೇನೆ ಏಕಾಂಗಿ ಸ್ಪರ್ಧೆ: ಸಂಜಯ್ ರಾವತ್

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಉದ್ಧವ್ ಠಾಕ್ರೆ ಭೇಟಿ ಹೊರತಾಗಿಯೂ ತಮ್ಮ ನಿರ್ಧಾರ ಅಚಲವಾಗಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಶಿವಸೇನೆ ಎನ್ ಡಿಎ ಮೈತ್ರಿಕೂಟ ಸೇರುವುದಿಲ್ಲ ಎಂದು ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮುಂಬೈ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಉದ್ಧವ್ ಠಾಕ್ರೆ ಭೇಟಿ ಹೊರತಾಗಿಯೂ ತಮ್ಮ ನಿರ್ಧಾರ ಅಚಲವಾಗಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಶಿವಸೇನೆ ಎನ್ ಡಿಎ ಮೈತ್ರಿಕೂಟ ಸೇರುವುದಿಲ್ಲ ಎಂದು ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ಗುರುವಾರ ಮುಂಬೈನಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಉದ್ಧವ್ ಠಾಕ್ರೆ ಭೇಟಿಯ ಅಜೆಂಡಾ ಏನು ಎಂಬುದು ನಮಗೆ ಗೊತ್ತಿದೆ. ನಾವು ಈ ಹಿಂದೆ ತೆಗೆದುಕೊಂಡಿದ್ದ ನಿರ್ಧಾರಕ್ಕೆ ನಾವು ಬದ್ಧರಾಗಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ನಾವು ಎನ್ ಡಿಎ ಮೈತ್ರಿಕೂಟ ಸೇರದೇ ಏಕಾಂಗಿ ಸ್ಪರ್ಧೆ ಮಾಡುತ್ತೇವೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.
ಈ  ಹಿಂದೆ ಇದೇ ಸಂಜಯ್ ರಾವತ್ ಅವರು ತಮ್ಮ ಸಾಮ್ನಾ ಪತ್ರಿಕೆಯಲ್ಲಿ ಅಂಕಣ ಬರೆದು, ಅಮಿತ್ ಶಾ ಮತ್ತು ನರೇಂದ್ರ ಮೋದಿ ಜೋಡಿಗಿಂತ ಕಾಂಗ್ರೆಸ್ ಮತ್ತು ದೇವೇಗೌಡ ಅವರ ಜುಗಲ್ ಬಂದಿ ಉತ್ತಮವಾಗಿದೆ. ನರೇಂದ್ರ ಮೋದಿ, ಅಮಿತ್ ಶಾ ಜೋಡಿಗಿಂತ ಜ್ಯಾತ್ಯಾತೀತರಾದ ದೇವೇಗೌಡರು ಉತ್ತಮ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com