ಶಾಸಕ ಜಿಗ್ನೇಶ್ ಮೇವಾನಿ, ಜೆಎನ್ ಯು ವಿದ್ಯಾರ್ಥಿ ಮುಖಂಡ ಉಮರ್ ಖಲೀದ್ ಗೆ ಜೀವ ಬೆದರಿಕೆ

ಸಾಮಾಜಿಕ ಕಾರ್ಯಕರ್ತ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಜೆಎನ್ ಯು ವಿದ್ಯಾರ್ಥಿ ಮುಖಂಡ ಉಮರ್ ಖಲೀದ್ ಗೆ ಪ್ರಾಣ ಬೆದರಿಕೆ ಕರೆಗಳು ಬಂದಿದ್ದು, ಪೊಲೀಸ್ ಭದ್ರತೆಗಾಗಿ ಮನವಿ ಮಾಡಿಕೊಳ್ಳಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಸಾಮಾಜಿಕ ಕಾರ್ಯಕರ್ತ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಜೆಎನ್ ಯು ವಿದ್ಯಾರ್ಥಿ ಮುಖಂಡ ಉಮರ್ ಖಲೀದ್ ಗೆ ಪ್ರಾಣ ಬೆದರಿಕೆ ಕರೆಗಳು ಬಂದಿದ್ದು, ಪೊಲೀಸ್ ಭದ್ರತೆಗಾಗಿ ಮನವಿ ಮಾಡಿಕೊಳ್ಳಲಾಗಿದೆ.
ಈ ಬಗ್ಗೆ ಉಭಯ ಮುಖಂಡರು ಟ್ವಿಟರ್ ನಲ್ಲಿ ತಮ್ಮ ಆತಂಕ ಹಂಚಿಕೊಂಡಿದ್ದು, ಭೂಗತ ಪಾತಕಿಯೋರ್ವ ಜಿಗ್ನೇಶ್ ಮೇವಾನಿ ಮತ್ತು ಉಮರ್ ಖಲೀದ್ ಅವರಿಗೆ ಪ್ರಾಣ ಬೆದರಿಕೆ ಹಾಕಿದ್ದಾರಂತೆ,  ಇನ್ನು ಜೀವ ಬೆದರಿಕೆ ಹಾಕಿದ ಭೂಗತ ಪಾತಕಿಯನ್ನು ರವಿ ಪೂಜಾರಿ ಎಂದು ಹೇಳಲಾಗುತ್ತಿದ್ದು, ಕೂಡಲೇ ತಮಗೆ ಭದ್ರತೆ ಒದಗಿಸಬೇಕು ಎಂದು ಉಭಯ ಮುಖಂಡರು ಮನವಿ ಮಾಡಿದ್ದಾರೆ.
ಈ ಬಗ್ಗೆ ಜಿಗ್ನೇಶ್ ಮೇವಾನಿ ಮತ್ತು ಉಮರ್ ಖಲೀದ್ ಪೊಲೀಸರಿಗೆ ದೂರು ನೀಡಿದ್ದು, ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 
ದೂರಿನಲ್ಲಿ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಉಮರ್ ಖಲೀದ್ ತನ್ನ ಹಿಟ್ ಲಿಸ್ಟ್ ನಲ್ಲಿರುವುದಾಗಿ ಪಾತಕಿ ರವಿ ಪೂಜಾರಿ ಹೇಳಿದ್ದಾನೆ ಎನ್ನಲಾಗಿದೆ. ಈ ಹಿಂದೆಯೂ ಕೂಡ ಇದೇ ರವಿ ಪೂಜಾರಿ 2016ರಲ್ಲಿ ತನ್ನನ್ನು ಕೊಲ್ಲುವುದಾಗಿ ಹೇಳಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಶಾಸಕ ಜಿಗ್ನೇಶ್ ಮೇವಾನಿ ಬಿಜೆಪಿ ವಿರುದ್ಧದ ಹೋರಾಟದ ಪ್ರಮುಖ ಹೋರಾಟಗಾರನಾಗಿದ್ದು, ಉಮರ್ ಖಲೀದ್ ಜೆಎನ್ ಯು ವಿದ್ಯಾರ್ಥಿ ಮುಖಂಡರಾಗಿದ್ದಾರೆ. ಈ ಹಿಂದೆ ಸಂಸತ್ ಭವನದ ಮೇಲಿನ ದಾಳಿ ಪ್ರಕರಣ ರೂವಾರಿ ಅಫ್ಜಲ್ ಗುರುವಿನ ಗಲ್ಲು ಶಿಕ್ಷೆ ವಿರುದ್ಧ ಪ್ರತಿಭಟನೆ ಮಾಜಿ ಉಮರ್ ಖಲೀದ್ ಸುದ್ದಿಗೆ ಗ್ರಾಸವಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com