ಬಿಜೆಪಿ ವಿರೋಧಿ ಪಕ್ಷಗಳೊಂದಿಗೆ ಕೈ ಜೋಡಿಸಲು ಸಿದ್ಧ: ಸಿಪಿಐಎಂ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಸೋಲಿಸುವುದೇ ನಮ್ಮ ಮುಂದಿನ ಗುರಿಯಾಗಿದ್ದು, ಬಿಜೆಪಿ ವಿರೋಧಿ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಪಾಟ್ನಾ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಸೋಲಿಸುವುದೇ ನಮ್ಮ ಮುಂದಿನ ಗುರಿಯಾಗಿದ್ದು, ಬಿಜೆಪಿ ವಿರೋಧಿ ಮನಃಸ್ಥಿತಿಯ ಪಕ್ಷಗಳಗೊಂದಿಗೆ ಕೈ ಜೋಡಿಸಲು ಸಿದ್ಧ ಎಂದು ಸಿಪಿಐಎಂ ಹೇಳಿದೆ.
ಪಾಟ್ನಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು, ಭಾರತೀಯ ಜನತಾ ಪಕ್ಷವನ್ನು ವಿರೋಧಿಸುವ ಯಾವುದೇ ಮೈತ್ರಿಕೂಟದೊಂದಿಗೆ  ನಾವು ಕೈ ಜೋಡಿಸಲು ಸಿದ್ಧ ಎಂದು ಹೇಳಿದ್ದಾರೆ. ಬಿಹಾರ ಅಥವಾ ದೇಶದ ಇನ್ನಾವುದೇ ರಾಜ್ಯದಲ್ಲೂ ಸಿಪಿಐಎಂ ಬಿಜೆಪಿ ವಿರೋಧಿ ಮೈತ್ರಿಕೂಟಕ್ಕೆ ಬೆಂಬಲ ನೀಡಲಿದ್ದು, ಗೌರವಯುತ ಸ್ಥಾನ ಹಂಚಿಕೆಗೆ ನಾವು ಸಿದ್ಧ ಎಂದು ಘೋಷಣೆ ಮಾಡಿದ್ದಾರೆ. 
ಈ ಹಿಂದೆ ಹೈಜರಾಬಾದ್ ನಲ್ಲಿ ಕಳೆದ ಏಪ್ರಿಲ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅತಿಥಿಗಳಾಗಿ ಪಾಲ್ಗೊಂಡಿದ್ದ ಸೀತಾರಾಮ್ ಯೆಚೂರಿ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಸೋಲಿಸುವುದೇ ನಮ್ಮ ಮೊದಲ ಆದ್ಯತೆ. ಈ ಆಧ್ಯತೆಯ ಮೇರೆಗೆ ನಾವು ಕಾರ್ಯತಂತ್ರ ರೂಪಿಸಲಿದ್ದೇವೆ. ಪ್ರಮುಖವಾಗಿ ಬಿಜೆಪಿ ವಿರೋಧಿ ಮತಗಳು ಹಂಚಿಕೆಯಾಗಬಾರದು ಎಂಬುದು ನಮ್ಮ ಆಶಯವಾಗಿದೆ ಎಂದು ಯೆಚೂರಿ ಹೇಳಿದ್ದರು. 
ಬಿಜೆಪಿಯನ್ನು ವಿರೋಧಿಸುವ ಯಾವುದೇ ಪಕ್ಷದೊಂದಿಗೆ ನಾವು ಕೈ ಜೋಡಿಸಲು ಸಿದ್ಧ. ಆದರೆ ಗೌರವಯುತ ಕ್ಷೇತ್ರಗಳ ಹಂಚಿಕೆ ಕಡ್ಡಾಯ ಎಂದು ಹೇಳಿದ್ದಾರೆ.
ಇನ್ನು ಕಳೆದ ಲೋಕಸಭಾ ಚುನಾವಣೆಯಲ್ಲಿ ಸಿಪಿಐಎಂ ಬಿಹಾರದಲ್ಲಿ ಕೇಲವೇ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ ಯಾವುದೇ ಆಭ್ಯರ್ಥಿಯೂ ಗೆಲುವ ಕಂಡಿರಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com