ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಬಿಎಸ್'ಪಿ ಜೊತೆ ಮೈತ್ರಿ ಮುಂದುವರಿಸಲು ಸಿದ್ಧ: ಅಖಿಲೇಶ್
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಬಹುಜನ ಸಮಾಜ ಪಕ್ಷದೊಂದಿಗೆ ಮೈತ್ರಿ ಮುಂದುವರೆಸಲು ಕೆಲ ಲೋಕಸಭಾ ಸೀಟುಗಳ ತ್ಯಾಗಕ್ಕೂ ಸಿದ್ಧವಿದ್ದೇವೆಂದು ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಸೋಮವಾರ ಹೇಳಿದ್ದಾರೆ...
ಮೈನ್ಪುರಿ (ಉತ್ತರಪ್ರದೇಶ): 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಬಹುಜನ ಸಮಾಜ ಪಕ್ಷದೊಂದಿಗೆ ಮೈತ್ರಿ ಮುಂದುವರೆಸಲು ಕೆಲ ಲೋಕಸಭಾ ಸೀಟುಗಳ ತ್ಯಾಗಕ್ಕೂ ಸಿದ್ಧವಿದ್ದೇವೆಂದು ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಸೋಮವಾರ ಹೇಳಿದ್ದಾರೆ.
ಭಾನುವಾರ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಬಿಎಸ್'ಪಿ ಜೊತೆಗಿನ ನಮ್ಮ ಮೈತ್ರಿ ಮುಂದುವರೆಯಲಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಲೋಕಸಭಾ ಸೀಟುಗಳನ್ನು ಕಳೆದುಕೊಳ್ಳುವ ಪರಿಸ್ಥಿತಿಗಳು ಬಂದರೂ ಅದಕ್ಕೆ ನಾವು ಸಿದ್ಧವಿದ್ದೇವೆಂದು ಹೇಳಿದ್ದಾರೆ.
ವಿಶ್ವದ ಅತ್ಯಂತ ಶೀಘ್ರಗತಿಯಲ್ಲಿ ಬೆಳೆಯುತ್ತಿದೆ. ಇದೇ ನೆರೆ ರಾಷ್ಟ್ರಗಳು ಪಾಕಿಸ್ತಾತನ ಹಾಗೂ ಚೀನಾ ದೇಶಗಳನ್ನು ನಮ್ಮ ವಿರುದ್ಧ ಬಳಕೆ ಮಾಡಿಕೊಳ್ಳುತ್ತಿವೆ. ಇಂದು ಚೀನಾ ನಮ್ಮ ಪ್ರತಿಸ್ಪರ್ಧಿಯಾಗಿ ಬೆಳೆಯುತ್ತಿದೆ ಎಂದು ತಿಳಿಸಿದ್ದಾರೆ.