ಏಮ್ಸ್ ಗೆ ಭೇಟಿ ನೀಡಿ ವಾಜಪೇಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸೋಮವಾರ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ...
ಅಟಲ್ ಬಿಹಾರಿ ವಾಜಪೇಯಿ
ಅಟಲ್ ಬಿಹಾರಿ ವಾಜಪೇಯಿ
Updated on: 
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸೋಮವಾರ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ದೆಹಲಿ(ಏಮ್ಸ್)ಗೆ ದಾಖಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಪತ್ರೆಗೆ ಭೇಟಿ ನೀಡಿ, ಮಾಜಿ ಪ್ರಧಾನಿಯ ಆರೋಗ್ಯ ವಿಚಾರಿಸಿದ್ದಾರೆ. 
ಅಟಲ್‌ ಬಿಹಾರಿ ವಾಜಪೇಯಿ  ಏಮ್ಸ್ ಗೆ ದಾಖಲಾಗುತ್ತಿದ್ದಂತೆ ಹಲವಾರು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಪ್ರಧಾನಿ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಹಾಗೂ ಕೇಂದ್ರ ಸಚಿವರು ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಅಟಲ್‌ ಬಿಹಾರಿ ವಾಜಪೇಯಿ ಆರೋಗ್ಯ ವಿಚಾರಿಸಿದರು. 
ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳುತ್ತಿರುವ ವಾಜಪೇಯಿ ಅವರನ್ನು ಇಂದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶ್ವಾಸಕೋಶಶಾಸ್ತ್ರಜ್ಞ ಮತ್ತು ಏಮ್ಸ್‌ನ ಹಾಲಿ ನಿರ್ದೇಶಕರಾಗಿರುವ ಡಾ. ರಂದೀಪ್ ಗುಲೇರಿಯಾ ಅವರ ನೇತೃತ್ವದ ತಂಡ ವಾಜಪೇಯಿ ಅವರ ಆರೋಗ್ಯವನ್ನು ಪರಿಶೀಲಿಸುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 
ಕಾಂಗ್ರೆಸ್ಸೇತರ ಸರ್ಕಾರದ ಪ್ರಧಾನಿಯಾಗಿ ಪೂರ್ಣಾವಧಿ(5 ವರ್ಷ) ಪೂರೈಸಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆ ವಾಜಪೇಯಿ ಅವರದ್ದು. ಪದ್ಮ ವಿಭೂಷಣ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಅವರಿಗೆ, 2015ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಗೌರವ, ಭಾರತ ರತ್ನ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ. ಅಮೇರಿಕನ್ ಸಂಸತ್ತಿನಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ ಮೊದಲ ವಿದೇಶಾಂಗ ವ್ಯವಹಾರಗಳ ಸಚಿವರೆಂಬ ಖ್ಯಾತಿ ಸಹ ಅವರಿಗಿದೆ. 
1924ರಲ್ಲಿ ಜನಿಸಿದ್ದ ವಾಜಪೇಯಿ 1942ರಲ್ಲಿ ನಡೆದ ಕ್ವಿಟ್ ಇಂಡಿಯಾ ಚಳುವಳಿ ಸಂದರ್ಭದಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ್ದರು. 
1991, 1996, 1998, 1999 ಮತ್ತು 2004ರಲ್ಲಿ ಲಖನೌದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com