ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿರ: ಏಮ್ಸ್ ವರದಿ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಸ್ಥಿರವಾಗಿದೆ ಎಂದು ದೆಹಲಿಯ ಅಖಿಲ ...
ಅಟಲ್ ಬಿಹಾರಿ ವಾಜಪೇಯಿ
ಅಟಲ್ ಬಿಹಾರಿ ವಾಜಪೇಯಿ
Updated on: 

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಸ್ಥಿರವಾಗಿದೆ ಎಂದು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ತಿಳಿಸಿದೆ.

ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಿಲ್ಲ ಎಂದು ಕೂಡ ಆಸ್ಪತ್ರೆ ತಿಳಿಸಿದೆ.
93 ವರ್ಷದ ಅಟಲ್ ಬಿಹಾರಿ ವಾಜಪೇಯಿ ಮೂತ್ರನಾಳದ ಸೋಂಕಿನಿಂದ ನಿನ್ನೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಆಸ್ಪತ್ರೆ ನಿರ್ದೇಶಕ ಡಾ ರಂದೀಪ್ ಗುಲೆರಿಯಾ ಚಿಕಿತ್ಸೆ ನೀಡುತ್ತಿದ್ದಾರೆ.

2009ರಲ್ಲಿ ಪಕ್ಷಪಾತವಾದ ನಂತರ ವಾಜಪೇಯಿಯವರು ಸಾರ್ವಜನಿಕ ಜೀವನದಿಂದ ದೂರವಾದರು. ಆ ಬಳಿಕ ಅವರು ದೆಹಲಿಯ ಕೃಷ್ಣ ಮೆನನ್ ಮಾರ್ಗ್ ನಲ್ಲಿರುವ ತಮ್ಮ ನಾಲ್ಕು ಗೋಡೆಯ ಮನೆಯೊಳಗೆ ಸೀಮಿತವಾಗಿಬಿಟ್ಟಿದ್ದರು.

ವಾಜಪೇಯಿಯವರ ಆರೋಗ್ಯ ವಿಚಾರಿಸಲು ವಿವಿಧ ರಾಜಕೀಯ ಮುಖಂಡರು ಆಸ್ಪತ್ರೆಗೆ ತೆರಳಿದರು. ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿ ಸುಮಾರು 50 ನಿಮಿಷ ಕಾಲ ಕಳೆದರು.

ಕಾನ್ಪುರದಲ್ಲಿ ಬಿಜೆಪಿ ಕಾರ್ಯಕರ್ತರು ವಾಜಪೇಯಿಯವರ ಆರೋಗ್ಯ ಶೀಘ್ರವಾಗಿ ಗುಣಮುಖವಾಗಲೆಂದು ವಿಶೇಷ ಹೋಮ ಹವನ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com