ಯೋಗಿ ರಾಜ್ಯದಲ್ಲಿ ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ನ್ನು ಚುಡಾಯಿಸಿದ ಪುಂಡರು

ಗೂಂಡಾಗಳ ಪುಂಡಾಟಗಳಿಗೆ ಕಡಿವಾಣ ಹಾಕಲು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಎಷ್ಟೇ ಪ್ರಯತ್ನಪಟ್ಟರೂ ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ಸು ಸಿಗುತ್ತಿರುವ ಲಕ್ಷಣಗಳಿಲ್ಲ.
ಯೋಗಿ ರಾಜ್ಯದಲ್ಲಿ ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ನ್ನು ಚುಡಾಯಿಸಿದ ಪುಂಡರು
ಯೋಗಿ ರಾಜ್ಯದಲ್ಲಿ ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ನ್ನು ಚುಡಾಯಿಸಿದ ಪುಂಡರು
Updated on
ವಾರಣಾಸಿ: ಗೂಂಡಾಗಳ ಪುಂಡಾಟಗಳಿಗೆ ಕಡಿವಾಣ ಹಾಕಲು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಎಷ್ಟೇ ಪ್ರಯತ್ನಪಟ್ಟರೂ ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ಸು ಸಿಗುತ್ತಿರುವ ಲಕ್ಷಣಗಳಿಲ್ಲ. ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಅವರನ್ನು ಪುಂಡರು ಚುಡಾಯಿಸಿರುವುದು ಇದಕ್ಕೆ ತಾಜಾ ಉದಾಹರಣೆಯಾಗಬಲ್ಲದು. 
ಜೂ.11 ರಂದು ರಾತ್ರಿ ಈ ಘಟನೆ ನಡೆದಿದ್ದು, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆಯಾಗಿರುವ ಅನುಪ್ರಿಯಾ ಪಟೇಲ್, ಕಾಶಿಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದಾಗ ಅರೋಯ್ -ಮಿರ್ಝಮುರಾಡ್ ನಲ್ಲಿ ಈ ಘಟನೆ ನಡೆದಿದ್ದು, ನಂಬರ್ ಪ್ಲೇಟ್ ಸಹ ಇಲ್ಲದ ವಾಹನದಲ್ಲಿ ತೆರಳುತ್ತಿದ್ದ ಮೂವರು ಯುವಕರು ಸಚಿವರ ಕಾರನ್ನು ಓವರ್ ಟೇಕ್ ಮಾಡಿ ಅಸಭ್ಯ ಶಬ್ದಗಳನ್ನು ಹೇಳಿದ್ದಾರೆ.  ಅಷ್ಟೇ ಅಲ್ಲದೇ ಭದ್ರತಾ ಸಿಬ್ಬಂದಿಗಳೊಂದಿಗೂ ಅಸಭ್ಯ ವರ್ತನೆ ತೋರಿದ್ದಾರೆ. 
ಕೇಂದ್ರ ಸಚಿವೆಯನ್ನು ಚುಡಾಯಿಸಿದವರನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಕೇಂದ್ರ ಸಚಿವೆ ಸ್ಮೃತಿ ಇರಾನಿಯವರಿಗೂ ಇದೇ ರೀತಿಯ ಅನುಭವವಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com