ದೇಶದಲ್ಲಿ ಯುವಕರಿಗೆ ಉದ್ಯೋಗ ಕಲ್ಪಿಸಲು ಪ್ರಧಾನಿ ಮೋದಿ ವಿಫಲ: ರಾಹುಲ್ ಗಾಂಧಿ

Published On :
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷ ಎರಡು ಕೋಟಿ ಯುವಕರಿಗೆ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಹೇಳಿದ್ದಾರೆ.
2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮುಂಬೈನಲ್ಲಿ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಮೋದಿ ಸರ್ಕಾರದ ವೈಫಲ್ಯಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕಳೆದ ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ಮೋದಿ ಪ್ರತಿ ವರ್ಷ ಎರಡು ಕೋಟಿ ಯುವಕರಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದರು. ಆದರೆ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅದನ್ನು ಈಡೇರಿಸಿಲ್ಲ ಎಂದು ರಾಹುಲ್ ಆರೋಪಿಸಿದ್ದಾರೆ.
ಚೀನಾ ಪ್ರತಿ 24 ಗಂಟೆಗೆ 50 ಸಾವಿರ ಯುವಕರಿಗೆ ಉದ್ಯೋಗ ಕಲ್ಪಿಸುತ್ತದೆ. ಆದರೆ ಭಾರತ ಕೇವಲ 450 ಯುವಕರಿಗೆ ಉದ್ಯೋಗ ಸೃಷ್ಟಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ಮೋದಿ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಆದರೆ ಕಳೆದ ಎಂಟು ವರ್ಷಗಳಲ್ಲೇ ಅತಿ ಹೆಚ್ಚು ನಿರುದ್ಯೋಗ ಸಮಸ್ಯೆ ಇದೆ ಎಂದು ಅವರ ಸಂಪುಟದ ಸಚಿವರೇ ಲೋಕಸಭೆಯಲ್ಲಿ ಹೇಳಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


