ಲೆಫ್ಟಿನೆಂಟ್ ಗೌರ್ನರ್ ನಿವಾಸದೆಡೆಗೆ ಆಪ್ ಪ್ರತಿಭಟನಾ ಮೆರವಣಿಗೆ: ಯಶ್ವಂತ್ ಸಿನ್ಹಾ ಸಾಥ್

ಆಮ್ ಆದ್ಮಿ ಪಕ್ಷದ ನಾಯಕರು ದೆಹಲಿ ಲೆಫ್ಟಿನೆಂಟ್ ಗೌರ್ನರ್ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಸತತ ಮೂರನೇ ದಿನವೂ ಮುಂದುವರೆದಿದೆ.
ಯಶ್ವಂತ್ ಸಿನ್ಹಾ
ಯಶ್ವಂತ್ ಸಿನ್ಹಾ
ದೆಹಲಿ: ಐಎಎಸ್  ಅಧಿಕಾರಿಗಳು ತಮ್ಮ ಮುಷ್ಕರ ನಿಲ್ಲಿಸುವಂತೆ ಗವರ್ನರ್ ನಿರ್ದೇಶನ ನೀಡಬೇಕು. ನಾಲ್ಕು ತಿಂಗಳಿನಿಂದ ಕೆಲಸ ಮಾಡದೆ ಅಡ್ಡಿಪಡಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ಆಮ್ ಆದ್ಮಿ ಪಕ್ಷದ ನಾಯಕರು ದೆಹಲಿ ಲೆಫ್ಟಿನೆಂಟ್ ಗೌರ್ನರ್ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಸತತ ಮೂರನೇ ದಿನವೂ ಮುಂದುವರೆದಿದೆ. 
ಜೂ.13 ರಂದು ಲೆಫ್ಟಿನೆಂಟ್ ಗೌರ್ನರ್ ನಿವಾಸದೆಡೆಗೆ ಆಮ್ ಆದ್ಮಿ ಪಕ್ಷದ ನಾಯಕರು ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ್ದು, ಮಾಜಿ ಕೇಂದ್ರ ಸಚಿವ, ಮಾಜಿ ಬಿಜೆಪಿ ನಾಯಕ ಯಶ್ವಂತ್ ಸಿನ್ಹಾ ಆಮ್ ಆದ್ಮಿ ಪಕ್ಷದ ನಾಯಕರಿಗೆ ಸಾಥ್ ನೀಡಿದ್ದಾರೆ. ದೆಹಲಿಯ ಇತಿಹಾಸದಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಮತ್ತು ಅವರ ಕ್ಯಾಬಿನೆಟ್ ಸಹೋದ್ಯೋಗಿಗಳು  ಲೆ.ಗವರ್ನರ್ ಕಛೇರಿಯಲ್ಲಿ ಇಡೀ ರಾತ್ರಿ ಪ್ರತಿಭಟನೆ ನಡೆಸಿದ್ದರು. ಆಮ್ ಆದ್ಮಿ ಪಕ್ಷದ ನಡೆಯನ್ನು ಬಿಜೆಪಿ ಖಂಡಿಸಿದ್ದು,  ದೆಹಲಿ ಸಿಎಂ ನಡೆ ಪ್ರಜಾಪ್ರಭುತ್ವದ ಅಣಕ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com