ಪಣಜಿ; ಕಳೆದ ಮೂರು ತಿಂಗಳ ಕಾಲ ಅಮೆರಿಕಾದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆದಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಗುರುವಾರ ಮುಂಬೈಗೆ ಆಗಮಿಸಿದ್ದಾರೆ.
ಅನಾರೋಗ್ಯಕ್ಕೀಡಾಗಿದ್ದ ಪರಿಕ್ಕರ್ ಅವರು ಇದೇ ವರ್ಷ ಮಾರ್ಚ್ ತಿಂಗಳಿನಲ್ಲಿ ಚಿಕಿತ್ಸೆಗಾಗಿ ಅಮೆರಿಕಾಕ್ಕೆ ತೆರಳಿದ್ದರು.
ನಿನ್ನೆಯಷ್ಟೇ ಮಾಹಿತಿ ನೀಡಿದ್ದ ಗೋವಾ ಮುಖ್ಯಮಂತ್ರಿ ಕಚೇರಿ, ಪರಿಕ್ಕರ್ ಅವರು ಅಮೆರಿಕಾದಿಂದ ಮೊದಲಿಗೆ ಮುಂಬೈಗೆ ಆಗಮಿಸಲಿದ್ದಾರೆ. ನಂತರ ಅಲ್ಲಿಂದ ಮತ್ತೊಂದು ವಿಮಾನದಲ್ಲಿ ಗೋವಾ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆಂದು ಹೇಳಿತ್ತು.