ದೆಹಲಿ ಲೆಫ್ಟಿನೆಂಟ್ ಗೌರ್ನರ್ ಏಕೆ ಕೇಜ್ರಿವಾಲ್ ನ್ನು ಇನ್ನೂ ಭೇಟಿ ಮಾಡಿಲ್ಲ: ಆಪ್ ನಾಯಕರ ಪ್ರಶ್ನೆ

ದೆಹಲಿಯ ಐಎಎಸ್ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗೌರ್ನರ್ ಗೆ ಕೆಲವು ಬೇಡಿಕೆಗಳನ್ನು ಮುಂದಿಟ್ಟು ಆಮ್ ಆದ್ಮಿ ಪಕ್ಷ ನಡೆಸುತ್ತಿರುವ ಪ್ರತಿಭಟನೆ 4 ನೇ ದಿನವೂ ಮುಂದುವರೆದಿದೆ.
ದೆಹಲಿ ಲೆಫ್ಟಿನೆಂಟ್ ಗೌರ್ನರ್ ಏಕೆ ಕೇಜ್ರಿವಾಲ್ ನ್ನು ಇನ್ನೂ ಭೇಟಿ ಮಾಡಿಲ್ಲ: ಆಪ್ ನಾಯಕರ ಪ್ರಶ್ನೆ
ದೆಹಲಿ ಲೆಫ್ಟಿನೆಂಟ್ ಗೌರ್ನರ್ ಏಕೆ ಕೇಜ್ರಿವಾಲ್ ನ್ನು ಇನ್ನೂ ಭೇಟಿ ಮಾಡಿಲ್ಲ: ಆಪ್ ನಾಯಕರ ಪ್ರಶ್ನೆ
ನವದೆಹಲಿ: ದೆಹಲಿಯ ಐಎಎಸ್ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗೌರ್ನರ್ ಗೆ ಕೆಲವು ಬೇಡಿಕೆಗಳನ್ನು ಮುಂದಿಟ್ಟು ಆಮ್ ಆದ್ಮಿ ಪಕ್ಷ ನಡೆಸುತ್ತಿರುವ ಪ್ರತಿಭಟನೆ 4 ನೇ ದಿನವೂ ಮುಂದುವರೆದಿದೆ. 
ಲೆಫ್ಟಿನೆಂಟ್ ಗೌರ್ನರ್ ನ ನಿವಾಸದಲ್ಲಿ ಪ್ರತಿಭಟನೆ ನಡೆಸುತ್ತಿರುವ ದೆಹಲಿ ಸರ್ಕಾರದ ಮೂವರು ಸಚಿವರು, ಮುಖ್ಯಮಂತ್ರಿಗಳನ್ನು ಲೆಫ್ಟಿನೆಂಟ್ ಗೌರ್ನರ್ ಏಕೆ ಇನ್ನೂ ಭೇಟಿ ಮಾಡಿಲ್ಲ? ನಾಲ್ಕು ದಿನಗಳಿಂದ ಲೆಫ್ಟಿನೆಂಟ್ ಗೌರ್ನರ್ ಗೆ 4 ನಿಮಿಷವೂ ಬಿಡುವಿಲ್ಲವೇ ಎಂದು ಪ್ರಶ್ನಿಸಿದ್ದಾರೆ. 
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಹಾಗೂ ಹಿರಿಯ ಆಪ್ ನಾಯಕ ಸಂಜಯ್ ಸಿಂಗ್, ಮ್ಲುಖ್ಯಮಂತ್ರಿಗಳನ್ನು ಭೇಟಿ ಮಾಡಲು ಯಾರಿಗೂ ಅವಕಾಶ ನೀಡಲಾಗುತ್ತಿಲ್ಲ, ಮುಖ್ಯಮಂತ್ರಿಗಳನ್ನು ಬಂಧಿಸಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ. 
ಪ್ರಧಾನಿ ಮೋದಿ ಅಣತಿಯಂತೆ ಐಎಎಸ್ ಅಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ, ಅವರಿಗೆ ಲೆಫ್ಟಿನೆಂಟ್ ಗೌರ್ನರ್ ಅನಿಲ್ ಬೈಜಲ್ ಸಹ ಬೆಂಬಲ ನೀಡುತ್ತಿದ್ದಾರೆ ಎಂದು ಸಂಜಯ್ ಸಿಂಗ್ ಆರೋಪಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com