ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ದೇಶದ 8 ರಾಜ್ಯಗಳಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರು: ಮಾನ್ಯತೆ ಕುರಿತು ಎನ್ಸಿಎಂ ಸಭೆ

ಹಿಂದೂ ರಾಷ್ಟ್ರವಾಗಿರುವ ಭಾರತದಲ್ಲಿ ಒಟ್ಟಾರೆ 8 ರಾಜ್ಯಗಳಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗಿದ್ದು ಈ ರಾಜ್ಯದ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ...
ನವದೆಹಲಿ: ಹಿಂದೂ ರಾಷ್ಟ್ರವಾಗಿರುವ ಭಾರತದಲ್ಲಿ ಒಟ್ಟಾರೆ 8 ರಾಜ್ಯಗಳಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗಿದ್ದು ಈ ರಾಜ್ಯದ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಬಗ್ಗೆ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಉಪಸಮಿತಿ ಚರ್ಚಿಸಿದೆ. 
ಬೇಡಿಕೆ ಮತ್ತು ವಾಸ್ತವಾಂಶಗಳನ್ನು ಉಪಸಮಿತಿ ಅಧ್ಯಯನ ಮಾಡುತ್ತಿದ್ದು ಅಂತಿಮ ನಿರ್ಧಾರ ಇನ್ನೂ ಕೈಗೊಂಡಿಲ್ಲ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ತಿಳಿಸಿದ್ದಾರೆ. 
ಎನ್ಸಿಎಂ ಉಪಾಧ್ಯಕ್ಷ ಜಾರ್ಜ್ ಕುರಿಯನ್ ನೇತೃತ್ವದಲ್ಲಿ ಮೂರು ಸದಸ್ಯರ ಉಪ ಸಮಿತಿಯನ್ನು 6 ತಿಂಗಳ ಹಿಂದೆ ರಚಿಸಲಾಗಿತ್ತು. ಜಮ್ಮು ಮತ್ತು ಕಾಶ್ಮೀರ, ಮಿಜೋರಾಂ, ಪಂಜಾಬ್, ನಾಗಲ್ಯಾಂಡ್, ಮೇಘಾಲಯ, ಮಣಿಪುರ, ಅರುಣಾಚಲಪ್ರದೇಶ ಮತ್ತು ಲಕ್ಷದ್ವೀಪಗಳಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರೆಂದು ಘೋಷಿಸಬೇಕು ಎಂದುದ ಕೋರಿ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. 
2011ರ ಜನಗಣಿತ ಪ್ರಕಾರ ಜಮ್ಮು ಮತ್ತು ಕಾಶ್ಮೀರ ಶೇ.28.44, ಲಕ್ಷದ್ವೀಪದಲ್ಲಿ ಶೇ.2.5, ಮಿಜೋರಾಂ ಶೇ.2.7, ನಾಗಾಲ್ಯಾಂಡ್ ಶೇ.8.75, ಮೇಘಾಲಯ ಶೇ.11.53, ಪಂಜಾಬ್ ನಲ್ಲಿ ಶೇ. 38.40ರಷ್ಟು ಹಿಂದೂಗಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com