ಇಂದು ಮಧುರೆಯ ಮೀನಾಕ್ಷಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಕಾವೇರಿ ಅಚ್ಚುಕಟ್ಟಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನದಿ ತುಂಬಿ ಹರಿಯುತ್ತಿದೆ. ಈ ಹಿಂದೆ ಮಳೆ ಅಭಾವದಿಂದ ಸಮಸ್ಯೆ ಉಂಟಾಗುತ್ತಿತ್ತು. ಈ ಬಾರಿ ಯಾವುದೇ ಉತ್ತಮ ಮಳೆಯಾಗುತ್ತಿರುವುದರಿಂದ ನೀರು ಬಿಡುಗಡೆ ಮಾಡಲು ತೊಂದರೆ ಇಲ್ಲ ಎಂದರು.