ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಐದು ಮಂದಿ ಗಾಯಗೊಂಡಿದ್ದಾರೆ.
ರಂಜಾನ್ ಪ್ರಯುಕ್ತ ರಾಜ್ಯಾದ್ಯಂತ ಭಾರತೀಯ ಸೇನೆ ಕಟ್ಟೆಚ್ಚರ ವಹಿಸಿದ್ದು ಈ ಸಂಬಂಧ ಹಲವು ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆದು ವಾಹನಗಳ ಪರಿಶೀಲನೆಯಲ್ಲಿ ತೊಡಗಿವೆ. ಕಾಕ್ ಸರೈ ಎಂಬಲ್ಲಿ ವಾಹನಗಳ ಪರಿಶೀಲನೆ ನಡೆಸುತ್ತಿದ್ದಾಗ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ನಿನ್ನೆಯಷ್ಟೆ ಶ್ರೀನಗರದಲ್ಲಿ ಹಿರಿಯ ಪತ್ರಕರ್ತ ಶುಜಾತ್ ಬುಕಾರಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಬುಕಾರಿ ಸೇರಿದಂತೆ ಅವರ ಇಬ್ಬರು ಭದ್ರತಾ ಸಿಬ್ಬಂದಿ ಸಹ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರತೀಯ ಸೇನೆ ಕಟ್ಟೆಚ್ತರ ವಹಿಸಿದೆ.
ಕಾಕ್ ಸರೈ ಎಂಬಲ್ಲ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಏಕಾಏಕಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಸಹ ಗುಂಡಿನ ದಾಳಿ ನಡೆಸಿದ್ದಾರೆ.
ಸದ್ಯ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಐದು ಮಂದಿ ಗಾಯಗೊಂಡಿದ್ದಾರೆ.