ನವದೆಹಲಿ; ರೈಸಿಂಗ್ ಕಾಶ್ಮೀರ್' ದಿನ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯ ಹಾಗೂ ಅವರ ಇಬ್ಬರು ಅಂಗರಕ್ಷಕರ ಹತ್ಯೆ ಹಿನ್ನಲೆಯಲ್ಲಿ ಕಾಶ್ಮೀರ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡತಂದಿದ್ದು, ಈ ನಡುವಲ್ಲೇ ಕಾಶ್ಮೀರ ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಲು ಗೃಹ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.