ಗಡಿಯಲ್ಲಿ ಮತ್ತೆ ಪಾಕ್ ಉದ್ಧಟತನ; ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಮತ್ತೆ ತನ್ನ ಉದ್ಧಟತನ ಪ್ರದರ್ಶಿಸಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ನಡೆಸಲಾಗಿರುವ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಶನಿವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನೌಶೆರಾ; ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಮತ್ತೆ ತನ್ನ ಉದ್ಧಟತನ ಪ್ರದರ್ಶಿಸಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ನಡೆಸಲಾಗಿರುವ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಶನಿವಾರ ತಿಳಿದುಬಂದಿದೆ. 
ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್ ಬಳಿ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಬಿಕಾಸ್ ಗುರುಂಗ್ ಎಂಬ ಯೋಧ ಹುತಾತ್ಮರಾಗಿದ್ದಾರೆಂದು ವರದಿಗಳು ತಿಳಿಸಿವೆ. 
ರಂಜಾನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕೆಲ ದಿನಗಳ ಹಿಂದಷ್ಟೇ ಏಕಪಕ್ಷೀಯವಾಗಿ ಕದನ ವಿರಾಮ ಘೋಷಣೆ ಮಾಡಿತ್ತು. ಕೇಂದ್ರ ಸರ್ಕಾರ ಈ ನಿರ್ಧಾರ ಪಾಕ್ ಪೋಷಿತ ಭಯೋತ್ಪಾದಕರಿಗೆ ಭಯೋತ್ಪಾದನೆಯ ಸುಗ್ಗಿ ಕಾಲದಂತಾಗಿ ಮಾರ್ಪಟ್ಟಿದೆ. ಕೇಂದ್ರ ಸರ್ಕಾರದ ಕದನ ವಿರಾಮ ನಿರ್ಧಾರಕ್ಕೆ ಪಾಕಿಸ್ತಾನ ಕೂಡ ಒಪ್ಪಿಗೆ ನೀಡಿತ್ತು. ಕದನ ವಿರಾಮಕ್ಕೆ ಒಪ್ಪಿಗೆ ನೀಡುವ ಮೂಲಕ ಒಂದೆಡೆ ವಿಶ್ವದೆದೆರು ಕಪಟ ಮುಖವನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನ, ಮತ್ತೊಂದೆಡೆ ಗಡಿಯಲ್ಲಿ ತನ್ನ ಪುಂಡಾಟವನ್ನು ಮುಂದುವರೆಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com