ಪ್ರಧಾನಿ ಮೋದಿ ನಿವಾಸಕ್ಕೆ ಆಪ್ ಪ್ರತಿಭಟನಾ ರ್ಯಾಲಿಗೆ ಅನುಮತಿ ಇಲ್ಲ: ದೆಹಲಿ ಪೊಲೀಸ್

ದೆಹಲಿ ಲೆಫ್ಟಿನೆಂಟ್ ಗವರ್ನರ್ ಹಾಗೂ ಆಪ್ ಸರ್ಕಾರದ ನಡುವಿನ ಬಿಕ್ಕಟ್ಟು ತಾರಕಕೇರಿದ್ದು, ಪ್ರಧಾನಿ ನರೇಂದ್ರ ಮೋದಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಹಾಗೂ ಆಪ್ ಸರ್ಕಾರದ ನಡುವಿನ ಬಿಕ್ಕಟ್ಟು ತಾರಕಕೇರಿದ್ದು, ಪ್ರಧಾನಿ ನರೇಂದ್ರ ಮೋದಿ ನಿವಾಸದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಆಮ್ ಆದ್ಮಿ ಪಕ್ಷ ಅನುಮತಿ ಪಡೆದಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಕಳೆದ ಆರು ದಿನಗಳಿಂದ ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ದೆಹಲಿ ಮುಖ್ಯಮಂತ್ರಿ ತಪ್ಪ ಸಂಪುಟದ ಸಹೋದ್ಯೋಗಿಗಳೊಂದಿಗೆ ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ಆಪ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ.
ಪ್ರಧಾನಿ ಕಚೇರಿ ಅಥವಾ ನಿವಾಸದವರೆಗೆ ಆಪ್ ಕರೆ ನೀಡಿರುವ ಪ್ರತಿಭಟನಾ ರ್ಯಾಲಿಗೆ ಅನುಮತಿ ಇಲ್ಲ ಮತ್ತು ಅನುಮತಿಗಾಗಿ ಮನವಿ ಸಹ ಸಲ್ಲಿಸಿಲ್ಲ. ಅದು ನಿಷೇಧಿತ ಪ್ರದೇಶ ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಡಿ ಹೌಸ್ ಬಳಿ ಪ್ರತಿಭಟನಾಕಾರರನ್ನು ತಡೆಯಲಾಗುವುದು. ಒಂದು ರ್ಯಾಲಿ ಮುಂದುವರೆಸಲು ಯತ್ನಿಸಿದರೆ ಬಂಧಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com