ನೀತಿ ಆಯೋಗದ ಆಡಳಿತ ಮಂಡಳಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ತಮ್ಮನ್ನು ಸೇರಿದಂತೆ ನಾಲ್ವರು ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರಮೋದಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ದೆಹಲಿ ಬಿಕ್ಕಟ್ಟು ಬಗೆಹರಿಸುವಂತೆ ಮನವಿ ಮಾಡಿಕೊಂಡೆವು ಎಂದು ತಿಳಿಸಿದರು.