ಒಡಿಶಾ: ದೋಣಿ ಮುಳುಗಿ 6 ಪ್ರವಾಸಿಗರು ಸಾವು, 12 ಮಂದಿ ರಕ್ಷಣೆ

ಒಡಿಶಾದ ಚಿಲಿಕಾ ಲೇಕ್ ನಲ್ಲಿ 18 ಪ್ರವಾಸಿಗರು ಪ್ರಯಾಣಿಸುತ್ತಿದ್ದ ದೋಣಿ ಮುಳುಗಿದ ಪರಿಣಾಮ ಆರು ಮಂದಿ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಭುವನೇಶ್ವರ: ಒಡಿಶಾದ ಚಿಲಿಕಾ ಲೇಕ್ ನಲ್ಲಿ 18 ಪ್ರವಾಸಿಗರು ಪ್ರಯಾಣಿಸುತ್ತಿದ್ದ ದೋಣಿ ಮುಳುಗಿದ ಪರಿಣಾಮ ಆರು ಮಂದಿ ಜಲ ಸಮಾಧಿಯಾಗಿದ್ದಾರೆ ಮತ್ತು 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಭಾನುವಾರ ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಬಿರುಗಾಳಿ ಸಹಿತ ಮಳೆಯಿಂದಾಗಿ ದೋಣಿ ತಲೆ ಕೇಳಗಾಗಿದೆ. 12 ಮಂದಿಯನ್ನು ರಕ್ಷಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಓರ್ವ ಅಪ್ರಾಪ್ತ ಬಾಲಕಿ ಸೇರಿದಂತೆ ಇಬ್ಬರ ಮೃತದೇಹಗಳನ್ನು ಶನಿವಾರವೇ ಹೊರ ತೆಗೆಯಲಾಗಿದ್ದು, ಇತರೆ ನಾಲ್ವರ ಮೃತದೇಹವನ್ನು ಇಂದು ಹೊರ ತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರುಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com