ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ಧರಣಿ ಕೂರಲು ಬಿಟ್ಟವರು ಯಾರು: ದೆಹಲಿ 'ಹೈ' ಪ್ರಶ್ನೆ

ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್'ಗೆ ಧರಣಿ ಕುಳಿತುಕೊಳ್ಳಲು ಬಿಟ್ಟವರು ಯಾರು ಎಂದು ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಸರ್ಕಾರಕ್ಕೆ...
ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಧರಣಿ ನಡೆಸುತ್ತಿರುವುದು
ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಧರಣಿ ನಡೆಸುತ್ತಿರುವುದು
ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್'ಗೆ ಧರಣಿ ಕುಳಿತುಕೊಳ್ಳಲು ಬಿಟ್ಟವರು ಯಾರು ಎಂದು ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಸರ್ಕಾರಕ್ಕೆ ದೆಹಲಿ ನ್ಯಾಯಾಲಯ ಸೋಮವಾರ ಪ್ರಶ್ನೆ ಮಾಡಿದೆ. 
ಆಮ್ ಆದ್ಮಿ ಪಕ್ಷದ ನಾಯಕ ಕೇಜ್ರಿವಾಲ್ ಅವರು ನಡೆಸುತ್ತಿರುವ ಧರಣಿಯ ವಿರುದ್ಧ ಹಾಗೂ ದೆಹಲಿ ಸರ್ಕಾರದ ಐಎಎಸ್ ಅಧಿಕಾರಿಗಳು ನಡೆಸುತ್ತಿರುವ ಪ್ರತಿಭಟನೆ ಕುರಿತಂತೆ ದಾಖಲಾಗಿರುವ ಎರಡು ಪ್ರತ್ಯೇಕ ಅರ್ಜಿಗಳ ಕುರಿತಂತೆ ಇಂದು ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎ.ಕೆ.ಚಾವ್ಲಾ ಮತ್ತು ನವೀನ್ ಚಾವ್ಲಾ ಅವರಿದ್ದ ಪೀಠ, ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ಕೇಜ್ರಿವಾಲ್ ಧರಣಿ ಕೂರಲು ಬಿಟ್ಟವರು ಯಾರು ಎಂದು ಪ್ರಶ್ನಿಸಿದೆ. 
ಕೇಜ್ರಿವಾಲ್ ಅವರು ಧರಣಿ ನಡೆಸುತ್ತಿರುವುದೇ ಆದರೆ, ಅದು ಕಚೇರಿಯ ಹೊರಗಿರಬೇಕು ಎಂದು ದೆಹಲಿ ಸರ್ಕಾರದ ಪರವಾಗಿ ವಾದ ಮಂಡಿಸುತ್ತಿದ್ದ ವಕೀಲರಿಗೆ ನ್ಯಾಯಪೀಠ ತಿಳಿಸಿದೆ. 
ಕೇಜ್ರಿವಾಲ್ ಅವರು ಧರಣಿ ನಡೆಸುತ್ತಿರುವುದೇ ಆದರೆ, ಅದು ಕಚೇರಿಯ ಹೊರಗಿರಬೇಕು ಎಂದು ದೆಹಲಿ ಸರ್ಕಾರದ ಪರವಾಗಿ ವಾದ ಮಂಡಿಸುತ್ತಿದ್ದ ವಕೀಲರಿಗೆ ನ್ಯಾಯಪೀಠ ತಿಳಿಸಿದೆ. 

ಕೇಜ್ರಿವಾಲ್ ನಡೆಸುತ್ತಿರುವ ಧರಣಿ ವಿರುದ್ಧ ದೆಹಲಿ ವಿಧಾಸಭೆ ವಿರೋಧ ಪಕ್ಷದ ನಾಯಕ ವಿಜೇಂದರ್ ಗುಪ್ತಾ ಅವರೂ ಕೂಡ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಈ ಕುರಿತ ಅರ್ಜಿ ವಿಚಾರಣೆಯನ್ನು ಜೂನ್.22ರಂದು ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ. 

ಇನ್ನು ಐಎಎಸ್ ಅಧಿಕಾರಿಗಳ ಪ್ರತಿಭಟನೆ ಕುರಿತ ಅರ್ಜಿಯನ್ನು ವಿಚಾರಣೆ ನಡೆಸಿರುವ ನ್ಯಾಯಪೀಠ, ಐಎಎಸ್ ಅಧಿಕಾರಿಗಳನ್ನು ಪ್ರತಿನಿಧಿಸುತ್ತಿರುವ ಸಂಘಟನೆಯನ್ನು ಕೂಡ ಕಕ್ಷಿದಾರನಾಗಿ ಮಾಡಬೇಕೆಂದು ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com