ಪಾಕ್ ಹಾಗೂ ಉಗ್ರ ಸಂಘಟನೆ ಪರ ಘೋಷಣೆ: ಮೂವರ ಬಂಧನ, ಪ್ರಕರಣ ದಾಖಲು!

ಈದ್ ಸಂಭ್ರಮಾಚರಣೆ ವೇಳೆ ಕೆಲ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿರುವ ವಿಡಿಯೋ ವೈರಲ್ ಆಗಿದ್ದು ಈ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ...
ಬಂಧನ
ಬಂಧನ
Updated on
ಸಸರಾ(ಬಿಹಾರ): ಈದ್ ಸಂಭ್ರಮಾಚರಣೆ ವೇಳೆ ಕೆಲ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿರುವ ವಿಡಿಯೋ ವೈರಲ್ ಆಗಿದ್ದು ಈ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. 
ರೋಹ್ತಾಸ್ ಜಿಲ್ಲೆಯ ನಸ್ರಿಗಂಜ್ ಬಜಾಬ್ ನಲ್ಲಿ ಕೆಲ ಕಿಡಿಗೇಡಿಗಳು ಪಾಕಿಸ್ತಾನ ಹಾಗೂ ಭಯೋತ್ಪಾದಕ ಸಂಘಟನೆಗಳ ಪರ ಘೋಷಣೆಗಳನ್ನು ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಈ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದು ಅವರ ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲಿಸಲಾಗಿದೆ. 
ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದ್ದು 8 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಸ್ರಿಗಂಜ್ ಪೊಲೀಸ್ ಠಾಣಾಧಿಕಾರಿ ಸಮರ್ಥ್ ಚೌಧರಿ ತಿಳಿಸಿದ್ದಾರೆ. 
ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು ಇನ್ನು ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com