ಛತ್ತೀಸ್ ಗಡ : ಸಾರ್ವಜನಿಕ ಶೌಚಾಲಯದಲ್ಲಿ ಅನಿಲ ಸೋರಿಕೆ, ನಾಲ್ವರ ಸಾವು

ಬಿಜಾಪುರ ಜಿಲ್ಲೆಯಲ್ಲಿ ದಾರುಣ ಘಟನೆಯೊಂದು ಇಂದು ಬೆಳಿಗ್ಗೆ ಸಂಭವಿಸಿದೆ. ಸಾರ್ವಜನಿಕ ಶೌಚಾಲಯದಲ್ಲಿ ಅನಿಲ ಸೋರಿಕೆಯಾಗಿ ನಾಲ್ವರು ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಛತ್ತೀಸ್ ಗಡ: ಬಿಜಾಪುರ ಜಿಲ್ಲೆಯಲ್ಲಿ ದಾರುಣ ಘಟನೆಯೊಂದು ಇಂದು ಬೆಳಿಗ್ಗೆ  ಸಂಭವಿಸಿದೆ. ಸಾರ್ವಜನಿಕ ಶೌಚಾಲಯದಲ್ಲಿ  ಅನಿಲ ಸೋರಿಕೆಯಾಗಿ ನಾಲ್ವರು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ.

ಸಾರ್ವಜನಿಕ ಶೌಚಾಲಯದೊಳಗಿನ  ಸೆಪ್ಟಿಕ್ ಟ್ಯಾಂಕಿನಿಂದ ಅನಿಲ ಸೋರಿಕೆಯಾಗಿ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

 ಸುದ್ದಿ ತಿಳಿದು  ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com