ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ: ಮೂವರು ಜೆಇಎಂ ಉಗ್ರರು ಹತ

ಕಾಶ್ಮೀರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದ ಬೆನ್ನಲ್ಲೇ ಅತ್ತ ಗಡಿಯಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಶ್ರೀನಗರ: ಕಾಶ್ಮೀರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದ ಬೆನ್ನಲ್ಲೇ ಅತ್ತ ಗಡಿಯಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಪುಲ್ವಾಮ ಜಿಲ್ಲೆಯ ಹೈನಾತ್ರಾಲ್ ನಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ಸೇನಾಪಡೆಗಳೂ ಕೂಡಲೇ ಪ್ರದೇಶವನ್ನು ಸುತ್ತುವರೆದಿದ್ದಾರೆ. ಸೇನಾಪಡೆಗಳು ಆಗಮಿಸುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದು, ಈ ವೇಳೆ ಸೈನಿಕರು ನಡೆಸಿದ ಪ್ರತಿದಾಳಿಯಲ್ಲಿ 3 ುಗ್ರರು ಹತರಾಗಿದ್ದಾರೆ.
ಅಂತೆಯೇ ಘಟನಾ ಪ್ರದೇಶದಲ್ಲಿ ಮತ್ತೆ ಮೂವರು ಉಗ್ರರು ಅಡಗಿರುವ ಕುರಿತು ಶಂಕೆ ವ್ಯಕ್ತವಾಗುತ್ತಿದ್ದು, ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದೆ. ಉಗ್ರರೆಲ್ಲರೂ ಕುಖ್ಯಾತ ಉಗ್ರ ಸಂಘಟನೆ ಜೈಶ್ ಇ ಮೊಹಮದ್ ಸಂಘಟನೆಗೆ ಸೇರಿದವರು ಎನ್ನಲಾಗಿದೆ. 
ಪ್ರಸ್ತುತ ದಕ್ಷಿಣ ಕಾಶ್ಮೀರದ ಪುಲ್ವಾಣ ಜಿಲ್ಲೆಯ ಸುತ್ತಮುತ್ತರ ಗ್ರಾಮಗಳಲ್ಲಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com