ಸೇನಾ ಮುಖ್ಯಸ್ಥ ಬಿಪಿನ್ ರಾವತ್
ದೇಶ
ರಾಜಕೀಯ ಹಸ್ತಕ್ಷೇಪ ಸೇನೆಗೆ ಎದುರಾಗುವುದಿಲ್ಲ, ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆಯಲಿದೆ; ಸೇನಾ ಮುಖ್ಯಸ್ಥ
ರಾಜಕೀಯ ಹಸ್ತಕ್ಷೇಪ ಭಾರತೀಯ ಸೇನೆಗೆ ಎದುರಾಗುವುದಿಲ್ಲ, ಉಗ್ರರ ವಿರುದ್ಧದ ಕಾರ್ಯಾಚರಣೆ ಎಂದಿನಂತೆ ಮುಂದುವರೆಯಲಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಬುಧವಾರ ಹೇಳಿದ್ದಾರೆ...
ನವದೆಹಲಿ; ರಾಜಕೀಯ ಹಸ್ತಕ್ಷೇಪ ಭಾರತೀಯ ಸೇನೆಗೆ ಎದುರಾಗುವುದಿಲ್ಲ, ಉಗ್ರರ ವಿರುದ್ಧದ ಕಾರ್ಯಾಚರಣೆ ಎಂದಿನಂತೆ ಮುಂದುವರೆಯಲಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಬುಧವಾರ ಹೇಳಿದ್ದಾರೆ.
ರಾಜಧಾನಿ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಂಜಾನ್ ತಿಂಗಳಿನಲ್ಲಿ ಕದನ ವಿರಾಮ ಘೋಷಣೆ ಮಾಡಿದ್ದರಿಂದಾಗಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ. ರಾಜ್ಯದಲ್ಲಿ ರಾಜ್ಯಪಾಲರ ಆಡಳಿತವನ್ನು ಹೇರಲಾಗಿದೆ. ಆದರೆ, ಇದರಿಂದ ಸೇನಾ ಕಾರ್ಯಾಚರಣೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.
ಎಂದಿನಂತೆ ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ ಮುಂದುವರೆಯಲಿದೆ. ರಾಜಕೀಯ ಹಸ್ತಕ್ಷೇಪಗಳು ಭಾರತೀಯ ಸೇನೆಗೆ ಎದುರಾಗುವುದಿಲ್ಲ ಎಂದು ತಿಳಿಸಿದ್ದಾರೆ.


