ದೇಶ

ಮಾಜಿ ಪ್ರಧಾನಿ ಸಿಂಗ್ ನಿವಾಸದಲ್ಲಿ ಕಾಂಗ್ರೆಸ್ ನ ಕಾಶ್ಮೀರ ಸಮಿತಿ ಸಭೆ

ಮಾಜಿ ಪ್ರಧಾನಿ ಸಿಂಗ್ ನಿವಾಸದಲ್ಲಿ ಕಾಂಗ್ರೆಸ್ ನ ಕಾಶ್ಮೀರ ಸಮಿತಿ ಸಭೆ
ಮಾಜಿ ಪ್ರಧಾನಿ ಸಿಂಗ್ ನಿವಾಸದಲ್ಲಿ ಕಾಂಗ್ರೆಸ್ ನ ಕಾಶ್ಮೀರ ಸಮಿತಿ ಸಭೆ
Published On :
ನವದೆಹಲಿ: ಅತ್ತ ಬಿಜೆಪಿ-ಪಿಡಿಪಿ ಮೈತ್ರಿ ಮುರಿದುಬೀಳುತ್ತಿದ್ದಂತೆ ಇತ್ತ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿವಾಸದಲ್ಲಿ ಕಾಂಗ್ರೆಸ್ ನ ಕಾಶ್ಮೀರ ಸಮಿತಿ ಸಭೆ ನಡೆದಿದೆ. 
ಬಿಜೆಪಿ-ಪಿಡಿಪಿ ಮೈತ್ರಿ ಮುರಿದು ಬೀಳುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ಪಕ್ಷ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದು ಸ್ಪಷ್ಟಪಡಿಸಿತ್ತು. ಆದರೆ ಈಗ ಡಾ.ಸಿಂಗ್ ನಿವಾಸದಲ್ಲಿ ನಡೆದಿರುವ ಸಭೆ ಕುತೂಹಲ ಮೂಡಿಸಿದೆ. 
ಮೈತ್ರಿಕೂಟ ಛಿದ್ರವಾಗಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಬಿಜೆಪಿ-ಪಿಡಿಪಿಯೊಂದಿಗೆ ಮೈತ್ರಿ ಮಾಡುವ ಮೂಲಕ ದೊಡ್ಡ ತಪ್ಪು ಮಾಡಿದೆ ಎಂದು ಹೇಳಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.