ಉಗ್ರರಿಗೆ ಕರುಣೆ ತೋರಿಸುವುದಿಲ್ಲ: ಕಾಶ್ಮೀರಕ್ಕೆ ಬಿಜೆಯ ಹೊಸ ನೀತಿ!

ಜಮ್ಮ ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಮೈತ್ರಿಗೆ ವಿದಾಯ ಹೇಳಿದ್ದು ಇದರ ಬೆನ್ನಲ್ಲೇ ಇದೀಗ ಕಾಶ್ಮೀರದಲ್ಲಿ ಹೆಚ್ಚುತ್ತಿರುವ...
ಭಾರತೀಯ ಸೇನೆ
ಭಾರತೀಯ ಸೇನೆ
Updated on
ನವದೆಹಲಿ: ಜಮ್ಮ ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಮೈತ್ರಿಗೆ ವಿದಾಯ ಹೇಳಿದ್ದು ಇದರ ಬೆನ್ನಲ್ಲೇ ಇದೀಗ ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆಯನ್ನು ಮಟ್ಟ ಹಾಕುವ ಸಲುವಾಗಿ ದಿಟ್ಟ ನಿರ್ಣಯವನ್ನು ಕೈಗೊಂಡಿದೆ. 
ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬಿಜೆಪಿ ಪಕ್ಷವು ಭಯೋತ್ಪಾಕರಿಗೆ ಯಾವುದೇ ಕರುಣೆ ತೋರಿಸುವುದಿಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಖಡಕ್ ಆಗಿ ಹೇಳಿದ್ದಾರೆ. 
ರಾಜ್ಯದಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸಲು ಪಿಡಿಪಿಯ ಮೆಹಬೂಬಾ ಮುಫ್ತಿ ಮತ್ತು ಎನ್ಸಿಎಸ್ ಪಕ್ಷದ ಒಮರ್ ಅಬ್ದುಲ್ಲಾ ಇಬ್ಬರು ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರು ವಿರೋಧಿಸಿದ್ದರು ಎಂದು ರಾಮ್ ಮಾಧವ್ ಹೇಳಿದ್ದಾರೆ. 
ಪಾಕಿಸ್ತಾನ ಹಾಗೂ ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಡೆಸುವುದು, ಸೇನೆ ಮೇಲೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯುವುದು, ಏಕಪಕ್ಷೀಯವಾಗಿ ಕದನ ವಿರಾಮ ಹಾಕುವುದು ಇಂತಹ ಬೇಡಿಕೆಗಳು ಪಿಡಿಪಿ ಮುಂದಿಟ್ಟಿತ್ತು. ಇದೆಲ್ಲಾ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುವುದಿಲ್ಲ ಎಂದು ನಾವು ಹಲವು ಬಾರಿ ಹೇಳಿದ್ದೇವು ಎಂದು ರಾಮ್ ಮಾಧವ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com