ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರಿಗೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ.
ಜಲ್ಪೈಗುರಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟಿಎಂಸಿ ಮುಖಂಡರನ್ನು ಎನ್ ಕೌಂಟರ್ ಮಾಡುವುದಾಗಿ ದಿಲೀಪ್ ಬೆದರಿಕೆ ಹಾಕಿದ್ದರು,
ಪಕ್ಷದ ಕಾರ್ಯಕರ್ತರ ಹತ್ಯೆ ವಿರೋಧಿಸಿ ಬಿಜೆಪಿ ರಾಜ್ಯಾದ್ಯಾಂತ ಪ್ರತಿಭಟನೆ ಹಮ್ಮಿಕೊಂಡಿತ್ತು.
ಜೂನ್ 19 ರಂದು ಪ್ರತಿಭಟನಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ದಿಲೀಪ್ ಘೋಷ್. ಪಶ್ಚಿಮ ಬಂಗಾಳದಲ್ಲಿ ಗೂಂಡಾಗಿರಿ ಮಾಡುವ ನಾಯಕರುಗಳು ಜೈಲು ಸೇರುತ್ತಾರೆ ಅಥವಾ ನೇರವಾಗಿ ಎನ್ ಕೌಂಟರ್ ಗೆ ಗುರಿಯಾಗುತ್ತಾರೆ ಎಂದು ಹೇಳಿದ್ದರು.
ಪದೇ ಪದೇ ಘೋಷ್ ಇಂತ ರಾಜಕೀಯ ಬೆದರಿಕೆ ಹಾಕುತ್ತಿರುವ ಗಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ.