ಕಾಶ್ಮೀರ: ಪ್ರತಿಭಟನೆ ತಡೆಯಲು ಪ್ರತ್ಯೇಕವಾದಿ ನಾಯಕ ಯಾಸಿನ್ ಮಲ್ಲಿಕ್ ಬಂಧನ

ಪ್ರತ್ಯೇಕವಾದಿಗಳ ಪ್ರತಿಭಟನೆ ತಡೆಯುವುದಕ್ಕಾಗಿ ಜಮ್ಮು ಮತ್ತು ಕಾಶ್ಮೀರ ಲಿಬೆರೇಷನ್ ಫ್ರಂಟ್ ಅಧ್ಯಕ್ಷ ಯಾಸಿನ್...
ಯಾಸಿನ್ ಮಲ್ಲಿಕ್
ಯಾಸಿನ್ ಮಲ್ಲಿಕ್
Updated on
ಶ್ರೀನಗರ: ಪ್ರತ್ಯೇಕವಾದಿಗಳ ಪ್ರತಿಭಟನೆ ತಡೆಯುವುದಕ್ಕಾಗಿ ಜಮ್ಮು ಮತ್ತು ಕಾಶ್ಮೀರ ಲಿಬೆರೇಷನ್ ಫ್ರಂಟ್ ಅಧ್ಯಕ್ಷ ಯಾಸಿನ್ ಮಲಿಕ್ ಅವರನ್ನು ಬಂಧಿಸಲಾಗಿದೆ ಮತ್ತು ಹುರಿಯತ್ ಕಾನ್ಫೆರೆನ್ಸ್ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಖ್ ರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಲಿಕ್ ಅವರನ್ನು ಇಂದು ಬೆಳಗ್ಗೆ ಅವರ ಮೈಸುಮ ನಿವಾಸದಲ್ಲಿ ವಶಕ್ಕೆ ಪಡೆಯಲಾಗಿದ್ದು, ಕೋತಿಬಾಗ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಇನ್ನು ಮಿರ್ವೈಜ್ ಅವರನ್ನು ಅವರ ನಿಗೀನ್ ನಿವಾಸದಲ್ಲಿಲೇ ಗೃಹ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರತ್ಯೇಕವಾದಿಗಳು ನಿನ್ನೆಯಷ್ಟೇ ಕಣಿವೆ ರಾಜ್ಯದಲ್ಲಿ ನಾಗರಿಕರ ಹತ್ಯೆ ಮತ್ತು ಹಿರಿಯ ಪತ್ರಕರ್ತ ಶುಜಾತ್ ಬುಖಾರಿ ಹತ್ಯೆ ಖಂಡಿಸಿ ಇಂದು ಪ್ರತಿಭಟನೆಗೆ ಕರೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com