ಯೋಗ ಕಾರ್ಯಕ್ರಮಕ್ಕೆ ನಿತೀಶ್ ಗೈರು, ಬಿಜೆಪಿಗೆ ಪರೋಕ್ಷ ಎಚ್ಚರಿಕೆ ನೀಡಿದರೇ ಬಿಹಾರ ಸಿಎಂ!

ಆರ್ ಜೆಡಿ ಸಖ್ಯ ತೊರೆದು ಬಿಜೆಪಿಯೊಂದಿಗೆ ಕೈ ಜೋಡಿಸಿ ಬಿಹಾರದಲ್ಲಿ ಸರ್ಕಾರ ರಚನೆ ಮಾಡಿದ್ದ ನಿತೀಶ್ ಕುಮಾರ್ ಬಿಜೆಪಿ ವಿರುದ್ಧವೂ ಮುನಿಸಿಕೊಂಡರೇ ಎಂಬ ಅನುಮಾನಗಳು ಕಾಡತೊಡಗಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಪಾಟ್ನಾ: ಆರ್ ಜೆಡಿ ಸಖ್ಯ ತೊರೆದು ಬಿಜೆಪಿಯೊಂದಿಗೆ ಕೈ ಜೋಡಿಸಿ ಬಿಹಾರದಲ್ಲಿ ಸರ್ಕಾರ ರಚನೆ ಮಾಡಿದ್ದ ನಿತೀಶ್ ಕುಮಾರ್ ಬಿಜೆಪಿ ವಿರುದ್ಧವೂ ಮುನಿಸಿಕೊಂಡರೇ ಎಂಬ ಅನುಮಾನಗಳು ಕಾಡತೊಡಗಿವೆ.
ಇಂತಹುದೊಂದು ಅನುಮಾನಕ್ಕೆ ಕಾರಣವಾಗಿರುವುದು ನಿನ್ನೆ ನಡೆದ ಅಂತಾರಾಷ್ಟ್ರೀಯ ಯೋಗ ದಿನ.. ಹೌದು ಪ್ರಧಾನಿ ನರೇಂದ್ರ ಮೋದಿ ಅವರು ವೈಯುಕ್ತಿಕ ಆಸಕ್ತಿ ತೋರಿ ಆಚರಿಸಿಕೊಂಡು ಬರುತ್ತಿರುವ ಯೋಗ ದಿನಾಚರಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಗೈರಾಗಿದ್ದಾರೆ. ಬಿಹಾರ ರಾಜಧಾನಿ ಪಾಟ್ನಾದಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಹಾಜರಾಗುವಂತೆ ನಿತೀಶ್ ಕುಮಾರ್ ಅವರಿಗೆ ಆಹ್ವಾನ ನೀಡಲಾಗಿತ್ತು. ಸ್ವತಃ ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರೇ ನಿತೀಶ್ ಕುಮಾರ್ ರನ್ನು ಆಹ್ವಾನಿಸಿದ್ದರು.
ಅದಾಗ್ಯೂ ನಿತೀಶ್ ಕುಮಾರ್ ಗೈರಾಗಿರುವುದು ಜೆಡಿಯು ಮತ್ತು ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದನ್ನು ಒತ್ತಿ ಹೇಳುತ್ತಿದೆ.
ನಿತೀಶ್ ಅಸಮಾಧಾನಕ್ಕೆ ಕಾರಣವೇನು?
ಇನ್ನು ನಿತೀಶ್ ಕುಮಾರ್ ಅವರು ಈ ಪರಿ ಬಿಜೆಪಿ ವಿರುದ್ಧ ಅಸಮಾಧಾನಗೊಳ್ಳಲು ಕೇಂದ್ರ ಸರ್ಕಾರ ಕಾರಣವಂತೆ. ಈ ಹಿಂದೆ ಸಿಎಂ ನಿತೀಶ್ ಕುಮಾರ್ ಬಿಹಾರಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವಂತೆ ಕೇಳಿದ್ದರು. ಆದರೆ ಈ ಬೇಡಿಕೆಗೆ ಕೇಂದ್ರ ಸರ್ಕಾರ ಈ ವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಇದೇ ಕಾರಣಕ್ಕೆ ನಿತೀಶ್ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಯೋಗ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಜೆಡಿಯು ನಿಂದ ವಿಶೇಷ ಆತಿಥ್ಯ ನಿರೀಕ್ಷೆ ಮಾಡದಂತೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com