ಇಂದು ಜಮ್ಮುವಿನಲ್ಲಿ ಶ್ಯಾಮ್‌ಪ್ರಸಾದ್ ಮುಖರ್ಜಿ ಸ್ಮರಣಾರ್ಥ ನಡೆದ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರುಪಾಯಿ ನೀಡಿದ್ದರು. ಆದರೂ ಪಿಡಿಪಿ ಸರ್ಕಾರ ಜಮ್ಮುವಿನ ಅಭಿವೃದ್ಧಿಯನ್ನು ಕಡೆಗಣಿಸಿತ್ತು ಎಂದು ಆರೋಪಿಸಿದರು.