ಅಮರನಾಥ ಯಾತ್ರೆ ವೇಳೆ ಭಾರೀ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದರು ಹತರಾದ ಇಸಿಸ್ ಉಗ್ರರು!

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಶುಕ್ರವಾರ ನಡೆಸಿದ್ದ ಎನ್'ಕೌಂಟರ್ ನಲ್ಲಿ ಹತರಾದ ಇಸ್ಲಾಮಿಕ್ ಸ್ಟೇಟ್ಸ್ ಉಗ್ರ ಸಂಘಟನೆಗೆ ಸೇರಿದ ನಾಲ್ವರು ಉಗ್ರರು ಅಮರನಾಥ ಯಾತ್ರೆ ಸಂದರ್ಭದಲ್ಲಿ ಭಾರೀ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಶುಕ್ರವಾರ ನಡೆಸಿದ್ದ ಎನ್'ಕೌಂಟರ್ ನಲ್ಲಿ ಹತರಾದ ಇಸ್ಲಾಮಿಕ್ ಸ್ಟೇಟ್ಸ್ ಉಗ್ರ ಸಂಘಟನೆಗೆ ಸೇರಿದ ನಾಲ್ವರು ಉಗ್ರರು ಅಮರನಾಥ ಯಾತ್ರೆ ಸಂದರ್ಭದಲ್ಲಿ ಭಾರೀ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ. 
ನಿನ್ನೆ ನಡೆದ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿತ್ತು. ನಾಲ್ವರು ಉಗ್ರರ ಹತ್ಯೆ ಕಾಶ್ಮೀರದಲ್ಲಿ ತನ್ನ ಅಸ್ಥಿತ್ವ ಸ್ಥಾಪಿಸಲು ಯತ್ನ ನಡೆಸುತ್ತಿದ್ದ ಇಸಿಸ್ ಉಗ್ರ ಸಂಘಟನೆಗೆ ದೊಡ್ಡ ಹೊಡೆತ ನೀಡಿದಂತಾಗಿದೆ. 
ಇಸಿಸ್ ಉಗ್ರ ಸಂಘಟನೆಗೆ ಸೇರಿದ ಇನ್ನೂ 2-3 ಉಗ್ರರು ಕಣಿವೆ ರಾಜ್ಯ ಕಾಶ್ಮೀರದಲ್ಲಿ ಸಕ್ರಿಯರಾಗಿದ್ದಾರೆಂದು ಹೇಳಲಾಗುತ್ತಿದ್ದು, ಸೇನಾಪಡೆಗಳು ತಮ್ಮ ಕಾರ್ಯಾಚರಣೆಗಳನ್ನು ಮುಂದುವರೆಸಿವೆ. 
ಅಮರನಾಥ ಯಾತ್ರೆಗೆ ಉಗ್ರರ ಬೆದರಿಕೆಗಳಿರುವುದರಿಂದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕಠಿಣ ತರಬೇತಿಗಳನ್ನು ಪಡೆದುಕೊಕಂಡಿರುವ ಎನ್ಎಸ್'ಜಿ ಪಡೆಗಳು ಅಮರನಾಥ ಯಾತ್ರೆ ವೇಳೆ ಭದ್ರತೆಯನ್ನು ನೀಡಲಿದ್ದು, ಉಗ್ರ ವಿರೋಧಿ ಕಾರ್ಯಾಚರಣೆಗೆ ಬಿಎಸ್ಎಫ್ ಯೋಧರು ಸಾಧ್ ನೀಡಿದ್ದಾರೆ. 
ಜೂನ್ 28 ರಿಂದ ಹಿಮಾಲಯದ ತಪ್ಪಲಲ್ಲಿ ಇರುವ ಅಮರನಾಥ ದೇಗುಲಕ್ಕೆ ಯಾತ್ರೆ ಆರಂಭಗೊಳ್ಳಲಿದೆ. ಎರಡು ತಿಂಗಳುಗಳ ಕಾಲ ಯಾತ್ರೆ ನಡೆಯಲಿದ್ದು, ಆಗಸ್ಟ್ ಅಂತ್ಯದಲ್ಲಿ ಯಾತ್ರೆ ಅಂತ್ಯಗೊಳ್ಳಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com