ಪೊಲೀಸರು ಈ ಪ್ರಕರಣದ ಪ್ರಾಥಮಿಕ ತನಿಖೆಯ ನಂತರ ಇನ್ನೊಬ್ಬ ಮೇಜರ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಅವರು ಶೈಲಜಾ ಹಾಗೂ ಆಕೆಯ ಪತಿಗೆ ಇಬ್ಬರಿಗೂ ಸ್ನೇಹಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ಈ ಸಂಬಂಧ ಅವರನ್ನು ಸಂಪರ್ಕಿಸಲು ಪೊಲೀಸರು ಯತ್ನಿಸಿದ್ದು, ಈಗ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಅಲ್ಲದೆ ಫೋನ್ ಕೂಡ ಸ್ವಿಚ್ ಆಫ್ ಬರುತ್ತಿದೆ. ಹೀಗಾಗಿ ಪೊಲೀಸರು ಅವರ ಮೇಲೆಯೇ ಬಲವಾದ ಅನುಮಾನ ವ್ಯಕ್ತಪಡಿಸಿದ್ದಾರೆ.