ತಮಿಳುನಾಡು ರಾಜ್ಯಪಾಲರ ವಿರುದ್ಧ ಪ್ರತಿಭಟನೆ, ಸ್ಟಾಲಿನ್ ಮೇಲೆ ಕೇಸು ದಾಖಲು

ತಮಿಳುನಾಡಿನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ವಿರುದ್ಧ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಡಿಎಂಕೆ ಕಾರ್ಯಾಧ್ಯಕ್ಷ ಎಂ. ಕೆ. ಸ್ಟಾಲಿನ್ ಹಾಗೂ ಪಕ್ಷದ ಇತರ ಕಾರ್ಯಕರ್ತರ ವಿರುದ್ಧ ಪೊಲೀಸರು ಇಂದು ದೂರು ದಾಖಲಿಸಿಕೊಂಡಿದ್ದಾರೆ.
ಸ್ಟಾಲಿನ್
ಸ್ಟಾಲಿನ್

ಗೈಂಡಿ: ತಮಿಳುನಾಡಿನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ವಿರುದ್ಧ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ  ಡಿಎಂಕೆ ಕಾರ್ಯಾಧ್ಯಕ್ಷ ಎಂ. ಕೆ. ಸ್ಟಾಲಿನ್ ಹಾಗೂ ಪಕ್ಷದ ಇತರ ಕಾರ್ಯಕರ್ತರ ವಿರುದ್ಧ ಪೊಲೀಸರು ಇಂದು  ದೂರು ದಾಖಲಿಸಿಕೊಂಡಿದ್ದಾರೆ.

ಶುಕ್ರವಾರ ತ್ರಿಚಿಯಲ್ಲಿ 192 ಡಿಎಂಕೆ ಕಾರ್ಯಕರ್ತರ ಬಂಧನ ವಿರೋಧಿಸಿ ನಿನ್ನೆ ದಿನ  ರಾಜಭವನದ ಮುಂಭಾಗ ಸ್ಟಾಲಿನ್ ಹಾಗೂ ಪಕ್ಷದ ಇತರ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.ರಾಜ್ಯಪಾಲರು ಜಿಲ್ಲೆಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿ ಡಿಎಂಕೆ ಕಾರ್ಯಕರ್ತರನ್ನು ಬಂಧಿಸಲಾಗಿತ್ತು .

ತ್ರಿಚಿಯಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಬಂಧಿಸಿರುವುದರಿಂದ ರಾಜ್ಯಪಾಲರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸ್ಟಾಲಿನ್ ಪ್ರತಿಭಟನೆ ವೇಳೆ ಆಗ್ರಹಿಸಿದರು.
 
ಇಂದಿರಾಗಾಂಧಿ ಸೇರಿದಂತೆ ಅನೇಕ ರಾಜಕೀಯ ನಾಯಕರ ವಿರುದ್ಧ ಡಿಎಂಕೆ ಪಕ್ಷದ ಕಾರ್ಯಕರ್ತರು  ಕಪ್ಪು ಬಾವುಟ ಪ್ರದರ್ಶಿಸಿರುವ ಇತಿಹಾಸವಿದೆ. ಆದರೆ, ಯಾರೊಬ್ಬರು ಬಂಧಿಸಿರಲಿಲ್ಲ. ರಾಜ್ಯಪಾಲರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು  ಸ್ಟಾಲಿನ್ ಒತ್ತಾಯಿಸಿದ್ದರು.

ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಒ . ಪನ್ನೀರು ಸೆಲ್ವಂ ,ತಮ್ಮ ಭ್ರಷ್ಟಾಚಾರದ ಭಯದಿಂದ ರಾಜ್ಯಪಾಲರ ವಿರುದ್ದ ಮಾತನಾಡುತ್ತಿಲ್ಲ ಎಂದು ಸ್ಟಾಲಿನ್ ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com