ಸ್ಟೂಡೆಂಟ್ ಇಸ್ಲಾಮಿಕ್ ಮೂವ್‌ವೆಂಟ್ ಆಫ್ ಇಂಡಿಯಾ(ಸಿಮಿ) ಸಂಘಟನೆಯ ಎಂಟು ಮಂದಿ ಶಂಕಿತ ಉಗ್ರರು 2016ರ ಅಕ್ಟೋಬರ್ 30ರ ರಾತ್ರಿ ಜೈಲು ಸಿಬ್ಬಂದಿಯೋರ್ವರನ್ನು ಹತ್ಯೆ ಮಾಡಿ ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದರು. ಮಾರನೇ ದಿನ ಶಂಕಿತ ಉಗ್ರರನ್ನು ಎನ್‍ಕೌಂಟರ್ ಮಾಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.