ದೇಶ

ಜಮ್ಮು-ಕಾಶ್ಮೀರ: ರಜೌರಿಯಲ್ಲಿ ಯೋಧನ ಮೃತದೇಹ ಪತ್ತೆ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಯೋಧ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆಂದು ಸೋಮವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ರಜೌರಿಯಲ್ಲಿ ಯೋಧನ ಮೃತದೇಹ ಪತ್ತೆ
ಸಾಂದರ್ಭಿಕ ಚಿತ್ರ
Published On :
ಜಮ್ಮು; ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಯೋಧ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆಂದು ಸೋಮವಾರ ತಿಳಿದುಬಂದಿದೆ. 
ಸಿಪಾಯಿ ನೀರಜ್ ಕುಮಾರ್ (38) ಅವರ ಮೃತದೇಹ ರಜೌರಿ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಉತ್ತರಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೀರಜ್ ಅವರು ಕೆಲ ದಿನಗಳ ಹಿಂದಷ್ಟೇ ಹುಟ್ಟೂರು ರಜೌರಿಗೆ ಬಂದಿದ್ದರು. 
ರಜೌರಿಯ ಸಲಾರಿ ಪಥಲ್ ಎಂಬ ಗ್ರಾಮದ ಸುಂದರ್ ಬನಿ ಎಂಬ ಪ್ರದೇಶದಲ್ಲಿ ಯೋಧನ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 
ಯೋಧನ ಸಾವಿಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ, ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಅಂತಿಮ ಸಂಸ್ಕಾರಕ್ಕಾಗಿ ಯೋಧನ ಪಾರ್ಥೀವ ಶರೀರವನ್ನು ಕುಟುಂಬಸ್ಥರ ವಶಕ್ಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.