ಕಳೆದ ಶುಕ್ರವಾರ ರಾಜ್ಯಪಾಲರು ತ್ರಿಚಿ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದ ಡಿಎಂಕೆ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. 192 ಡಿಎಂಕೆ ಕಾರ್ಯಕರ್ತರ ಬಂಧನ ಖಂಡಿಸಿ ರಾಜಭವನದ ಮುಂದೆ ಪ್ರತಿಭಟನೆ ನಡೆಸಿದ ಡಿಎಂಕೆ ಕಾರ್ಯಾಧ್ಯಕ್ಷ ಎಂ. ಕೆ. ಸ್ಟಾಲಿನ್ ಹಾಗೂ ಪಕ್ಷದ ಇತರ ಕಾರ್ಯಕರ್ತರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.