ಹೈದರಾಬಾದ್'ನಲ್ಲಿ ಭೀಕರ ರಸ್ತೆ ಅಪಘಾತ: 5 ರೈತರು ಸಾವು, ಐವರಿಗೆ ಗಾಯ

ಹೈದರಾಬಾದ್'ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸದ್ದು, ಆಟೋ-ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿ 5 ಮಂದಿ ಸಾವನ್ನಪ್ಪಿದ್ದು, ಐವರಿಗೆ ಗಾಯವಾಗಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಹೈದರಾಬಾದ್; ಹೈದರಾಬಾದ್'ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸದ್ದು, ಆಟೋ-ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿ 5 ಮಂದಿ ಸಾವನ್ನಪ್ಪಿದ್ದು, ಐವರಿಗೆ ಗಾಯವಾಗಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. 
ಹೈದರಾಬಾದ್ 50 ಕಿಮೀ ದೂರದಲ್ಲಿರುವ ಲಿಂಗಮ್ಪಲ್ಲಿ ಬಳಿ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 
ಕಾರನ್ನು ಓವರ್ ಟೇಕ್ ಮಾಡಲು ಆಟೋ ಚಾಲಕ ಯತ್ನ ನಡೆಸಿದ್ದು, ಈ ವೇಳೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ. 
ಹೈದರಾಬಾದ್ ಮಾರುಕಟ್ಟೆಯಲ್ಲಿ ತರಕಾರಿಗಳನ್ನು ಮಾರಾಟ ಮಾಡುವ ಸಲುವಾಗಿ ರೈತರು ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಮೃತರನ್ನು ವಿ. ಶ್ರೀನಿವಾಸ್, ಸುಜಾತ, ಮಮತಾ, ಮರು ಮತ್ತು ಅಲ್ಪಲಿ ಎಂದು ಗುರ್ತಿಸಲಾಗಿದೆ. 
10 ಮಂದಿ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದರು. ಎಲ್ಲರೂ ಮಂಚಲ್ ಪೊಲೀಸ್ ಠಾಣಾ ನಿಯಂತ್ರಣಕ್ಕೆ ಬರುವ ಚೆನ್ನರೆಟ್ಟಿಹುಡ ನಿವಾಸಿಗಳಾಗಿದ್ದಾರೆ. 
ಲಿಂಗಮಪಲ್ಲಿ ಗೇಟ್ ಬಳಿ ಆಟೋ ತೆರಳುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಆಟೋ ಚಾಲಕ ಶ್ರೀನಿವಾಸ್ ನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com