ಎಐಎಡಿಎಂಕೆ 18 ಶಾಸಕರ ಅನರ್ಹತೆ ಪ್ರಕರಣ: ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಮದ್ರಾಸ್ ಹೈಕೋರ್ಟ್ ತಮ್ಮ ಶಾಸಕತ್ವ ಅನರ್ಹತೆಗೆ ಸಂಬಂಧಿಸಿದಂತೆ ಎರಡು ಭಿನ್ನ ನಿಲುವು ತಳೆದಿರುವ ಹಿನ್ನೆಲೆಯಲ್ಲಿ ...
ಶಾಸಕ ಟಿಟಿವಿ ದಿನಕರನ್
ಶಾಸಕ ಟಿಟಿವಿ ದಿನಕರನ್
Updated on
ನವದೆಹಲಿ: ಮದ್ರಾಸ್ ಹೈಕೋರ್ಟ್ ತಮ್ಮ ಶಾಸಕತ್ವ ಅನರ್ಹತೆಗೆ ಸಂಬಂಧಿಸಿದಂತೆ ಎರಡು ಭಿನ್ನ ನಿಲುವು ತಳೆದಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ಗೆ ವರ್ಗಾಯಿಸಬೇಕು ಎಂದು ಎಐಎಡಿಎಂಕೆಯ ೧೮ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ಜೂನ್ 27ರಂದು ವಿಚಾರಣೆ ನಡೆಸಲು  ಸರ್ವೋಚ್ಚ ನ್ಯಾಯಾಲಯ ಸೋಮವಾರ ಒಪ್ಪಿಕೊಂಡಿದೆ.
ನ್ಯಾಯಮೂರ್ತಿಗಳಾದ ಅರುಣ್‌ ಮಿಶ್ರಾ ಮತ್ತು ಎಸ್‌ ಕೆ ಕೌಲ್‌ ಅವರನ್ನು ಒಳಗೊಂಡ ರಜಾಕಾಲದ ಪೀಠ, ಎಐಎಡಿಎಂಕೆ 18 ಶಾಸಕರ ಅನರ್ಹತೆಯ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಮದ್ರಾಸ್‌ ಹೈಕೋರ್ಟ್‌ ಎಐಎಡಿಎಂಕೆಯ 18 ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಕಳೆದ ಜೂನ್‌ 14ರಂದು ಒಡಕು ತೀರ್ಪು ನೀಡಿದ್ದು, ಪ್ರಕರಣವನ್ನು ಮೂರನೇ ನ್ಯಾಯಾಧೀಶರಿಗೆ ವಹಿಸಲಾಗಿದ್ದು, ಅವರ ಅಭಿಪ್ರಾಯ ಆಧರಿಸಿ ತೀರ್ಪು ಹೊರಬೀಳಲಿದೆ. 
ಆದರೆ ಇದು ಒಂದು ಗಂಭೀರ ವಿಷಯವಾಗಿರುವುದರಿಂದ ಸುಪ್ರೀಂ ಕೋರ್ಟ್‌ ಇದರ ವಿಚಾರಣೆ ನಡೆಸಬೇಕು ಎಂದು 18 ಶಾಸಕರ ಪರವಾಗಿ ಹಾಜರಿದ್ದ ಹಿರಿಯ ವಕೀಲ ವಿಕಾಸ್‌ ಸಿಂಗ್‌ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com