ನವದೆಹಲಿ: ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಡಿಸಿಎಂ ಮನೀಶ್ ಸಿಸೋಡಿಯಾ ವಿರುದ್ಧ ದೆಹಲಿ ಪೊಲೀಸರು ಚಾರ್ಜ್ ಶೀಟ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಿಎಂ, ಡಿಸಿಎಂ ಸೇರಿ ಆಮ್ ಆದ್ಮಿ ಪಕ್ಷದ ಇತರೆ 7 ಶಾಸಕರ ವಿರುದ್ಧ ಕೇಸು ದಾಖಲಾಗಿತ್ತು.
ಫೆಬ್ರವರಿ 19 ರಂದು ದೆಹಲಿಯ ಮುಖ್ಯಮಂತ್ರಿಗಳ ನಿವಾಸದಲ್ಲಿ ತಡ ರಾತ್ರಿ ನಡೆದ ಸಭೆಯ ವೇಳೆ ತಮ್ಮ ಮೇಲೆ ಹಲ್ಲೆ ನಡೆದಿತ್ತು ಎಂದು ಮುಖ್ಯ ಕಾರ್ಯದರ್ಶಿ ಆರೋಪಿಸಿದ್ದರು.
ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಎಎಪಿ ಶಾಸಕರು ತಮ್ಮ ಮೇಲೆ ಹಲ್ಲೆ ಮಾಡಿದ್ದರು ಎಂದು ಅಂಶು ಪ್ರಕಾಶ್ ದೂರಿದ್ದರು.