ಪಿಎನ್ ಬಿ ಹಗರಣ: ಮೆಹುಲ್ ಚೋಕ್ಸಿ ವಿರುದ್ಧ ಇಡಿ ಚಾರ್ಜ್ ಶೀಟ್

ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ವಂಚನೆ ಪ್ರಕರಣದ ಆರೋಪಿ ಗೀತಾಂಜಲಿ ಜೆಮ್ಸ್ ಮಾಲೀಕ ಮೆಹುಲ್...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ವಂಚನೆ ಪ್ರಕರಣದ ಆರೋಪಿ ಗೀತಾಂಜಲಿ ಜೆಮ್ಸ್ ಮಾಲೀಕ ಮೆಹುಲ್ ಚೋಕ್ಸಿ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ವಿಶೇಷ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿದೆ.
ಅಕ್ರಮ ಹಣ ವಹಿವಾಟು ತಡೆ ಕಾಯ್ದೆ ಅಡಿ ಚೋಕ್ಸಿ ಹಾಗೂ ಐದು ಕಂಪನಿಗಳು ಸೇರಿದಂತೆ ಒಟ್ಟು 13 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಪಿಎನ್ ಬಿ ಹಗರಣಕ್ಕೆ ಸಂಬಂಧಿಸಿದಂತೆ ಮೆಹುಲ್ ಚೋಕ್ಸಿ ವಿರುದ್ಧ ಸಿಬಿಐ ದಾಖಲಿಸಿದ್ದ ಎಫ್ಐಆರ್ ಆದರಿಸಿ ಜಾರಿ ನಿರ್ದೇಶನಾಲಯ ಕಳೆದ ಫೆಬ್ರವರಿ ಅಕ್ರಮ ಹಣ ವಹಿವಾಟು ಪ್ರಕರಣ ದಾಖಲಿಸಿತ್ತು.
ಈ ಸಂಬಂಧ ಸಿಬಿಐ ವಿಶೇಷ ಕೋರ್ಟ್ ಈಗಾಗಲೇ ಚೋಕ್ಸಿ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿದ್ದು, ಅದನ್ನು ರದ್ದುಗೊಳಿಸುವಂತೆ ಆರೋಪಿ ಜೂನ್ 27ರಂದು ಕೋರ್ಟ್ ಗೆ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com