ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಚಟಪೊರ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಕುಪ್ವಾರಾ ಅರಣ್ಯದಲ್ಲಿ ಓರ್ವ ಭಯೋತ್ಪಾದಕನ ಹತ್ಯೆ ನಡೆದ ಕೆಲವೇ ಗಂಟೆಗಳ ನಂತರ ಈ ಎನ್ ಕೌಂಟರ್ ನಡೆದಿದೆ.
ಜಮ್ಮು ಕಾಶ್ಮೀರದ ಮಾಜಿ ಡಿಜಿಪಿ ಎಸ್ಪಿ ವಯೀದ್ ಪುಲ್ವಾರಾದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಸೇನೆ ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ ಎಂದು ಟ್ವೀಟ್ ಮಾಡಿದ್ದಾರೆ.
ಸ್ಥಳದಲ್ಲಿದ್ದ ಎಲ್ಲಾ ನಾಗರಿಕರನ್ನು ಸ್ಥಳಾಂದರಗೊಳಿಸ್ದ ಬಳಿಕ ಈ ಗುಂಡಿನ ಕಾಳಗ ನಡೆದಿದೆ.
ಜಮ್ಮು ಕಾಶ್ಮೀರ ಪುಲ್ವಾಮಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಎ ಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.