ಮುಖ್ಯಮಂತ್ರಿಗಳನ್ನು ಭೇಟಿ ಮಾಡುವುದಕ್ಕಾಗಿ ಕೆಂಗಲ್ ಹನುಮಂತಯ್ಯ ಗೇಟ್ ಬಳಿ ಕಾರು ನಿಲ್ಲಿಸಿ ಕಾಯುತ್ತಿದ್ದ ಉದ್ಯಮಿ ಏಕಾಏಕಿ ವಿಷ ಸೇವನೆ ಮಾಡುತ್ತಿರುವುದನ್ನು ಗಮನಿಸಿರುವ ಪಾದಚಾರಿಗಳು ಉದ್ಯಮಿಯನ್ನು ತಕ್ಷಣವೇ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ. " ಮಧ್ಯಾಹ್ನ 12.15 ರ ವೇಳೆಗೆ ಉದ್ಯಮಿ ಗಂಗಾಧರ್ (38) ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಕೆಂಗಲ್ ಹನುಮಂತಯ್ಯ ಗೇಟ್ ಬಳಿ ಕಾಯುತ್ತಿದ್ದರು. ಈ ನಡುವೆ ಏಕಾಏಕಿ ವಿಷ ಸೇವಿಸುತ್ತಿದ್ದುದ್ದನ್ನು ಸ್ಥಳೀಯರು ಗಮನಿಸಿದ್ದಾರೆ, ಆತ್ಮಹತ್ಯೆಗೆ ಯತ್ನಿಸಿದ ಉದ್ಯಮಿಯನ್ನು ಆಸ್ಪತ್ರೆ ದಾಖಲಿಸಲಾಗಿದ್ದು ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.